ಬೆಳಗಾವಿ-ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ.
ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ ಮತ್ತು ಪಶು ಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.
ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಈಗ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿದ್ದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಸೋನಾಲಿ ಸರ್ನೋಬತ್ ಹರ್ಷ ವ್ಯೆಕ್ತಪಡಿಸಿದ್ದಾರೆ.