Breaking News
Home / Breaking News / ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ರೇಡ್…

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ರೇಡ್…

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ರೇಡ್…
ಬೆಳಗಾವಿ- ಬೆಳಗಾವಿಯಲ್ಲಿ ಇವತ್ತು ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ಅಧಿಕಾರಿಗಳು ರೇಡ್ ಮಾಡಿದ್ದಾರೆ.

*ಜೂ.30ರಂದು ನಿವೃತ್ತಿಯಾಗಬೇಕಿದ್ದ ಹಿರಿಯ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದು,ಬೆಳಗಾವಿಯ ಲೋಕೋಪಯೋಗಿ ಇಲಾಖೆ ಸೂಪರಿಂಟೆಂಡೆಂಟ್ ಇಂಜಿನಿಯರ್ ಮನೆ, ಕಚೇರಿ ಸೇರಿ 6 ಕಡೆ ದಾಳಿ ನಡೆದಿದೆ‌

PWD ಸೂಪರಿಂಟೆಂಡೆಂಟ್ ಇಂಜಿನಿಯರ್ ಬಿ.ವೈ ಪವಾರ್ ಮನೆ, ಕಚೇರಿ ಮೇಲೆ ದಾಳಿ ನಡೆದಿದೆ.ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿರುವ ಸ್ವಂತ ಬಂಗಲೆ, ಸರ್ಕಾರಿ ಮನೆ, ಕಚೇರಿ ಮೇಲೆ ದಾಳಿ ನಡೆದಿದ್ದು,ಸರ್ಕಾರಿ ನಿವಾಸದ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ.

ನಿಪ್ಪಾಣಿಯಲ್ಲಿರುವ ಮನೆ, ಬೋರಗಾಂವದಲ್ಕಿರುವ ಟೆಕ್ಸ್ಟೈಲ್ ಪಾರ್ಕ್ ಮೇಲೂ ದಾಳಿ ನಡೆದಿದೆ.
ಬಿ.ವೈ ಪವಾರ್‌ಗೆ ಸೇರಿದ ಮನೆ, ಕಚೇರಿ ಸೇರಿ ಆರು ಕಡೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು,
25 ಕ್ಕೂ ಅಧಿಕ ಸಿಬ್ಬಂದಿಯಿಂದ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ದಾಖಲೆ ಪರಿಶೀಲನೆಯಲ್ಲಿ ತೊಡಗಿರುವ ಎಸಿಬಿ ಅಧಿಕಾರಿಗಳು ಪರಶೀಲನೆಯ ಕಾರ್ಯಾಚರಣೆ ಮುಂದುವರೆಸಿದ್ದಾರೆ.

*ಬಿ.ವೈ.ಪವಾರ್ ನಿವಾಸಕ್ಕೆ ಉಪಹಾರ ತರಿಸಿಕೊಂಡ ಎಸಿಬಿ ಅಧಿಕಾರಿಗಳು,ಬೆಳಗಾವಿಯ ಜಕ್ಕರಹೊಂಡದಲ್ಲಿ ಇರುವ ಬಿ.ವೈ.ಪವಾರ್ ನಿವಾಸದಲ್ಲಿ ಠೀಖಾನಿ ಹೂಡಿದ್ದಾರೆ.

Check Also

ಧಾರವಾಡದಿಂದ, ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರ ಪಟ್ಟು…!!

ಧಾರವಾಡ ‌ಲೋಕಸಭೆ ಅಭ್ಯರ್ಥಿ ಪ್ರಹ್ಲಾದ್ ‌ಜೋಶಿ ಬದಲಾವಣೆಗೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ: ಮಾ.31 ರ ಗಡುವು ನೀಡಿದ ಮಠಾಧೀಶರು… ಹುಬ್ಬಳ್ಳಿ- …

Leave a Reply

Your email address will not be published. Required fields are marked *