ಬೆಳಗಾವಿ: ನಗರ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಭಯಭೀತರಾಗಿದ್ದು, ಅರಣ್ಯ ಸಚಿವರಾದ ಉಮೇಶ ಕತ್ತಿ ಅವರು, ಬೆಳಗಾವಿಗೆ ಧಾವಿಸಿದ್ದು, ಮಧ್ಯಾಹ್ನ 2 ಗಂಟೆಗೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬೆಳಗಾವಿ ಮಹಾನಗರದಲ್ಲಿ ಕಳೆದ ಎರಡು ವಾರಗಳಿಂದ ಚಿರತೆ ನಗರದ ಗಾಲ್ಫ್ ಮೈದಾನದಲ್ಲಿ ಮನೆ ಮಾಡಿಕೊಂಡಿದ್ದು, ಚಿರತೆ ವನಿತಾ ವಿದ್ಯಾಲಯಲ್ಲಿ ಕಾಣಿಸಿತ್ತು. ಹೀಗಾಗಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಈ ವೇಳ ಪ್ರತ್ಯೇಕ್ಷವಾದರೂ ಬಲೆಗೆ ಬೀಳಲಿಲ್ಲ. ಇದು ಅರಣ್ಯ ವೈಫಲ್ಯ ವಿರುದ್ಧ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತುರ್ತು ಸಭೆ ಕರೆದಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ