ಬೆಳಗಾವಿ-ರಾತ್ರಿ ವೇಳೆಯೇ ಭೀಕರ ಸಿಲಿಂಡರ್ ಸ್ಪೋಟಗೊಂಡು,ಸಿಲಿಂಡರ್ ಸ್ಪೋಟದ ರಭಸಕ್ಕೆ ಮನೆಯ ಹಂಚುಗಳು ಹಾರಿಹೋಗಿದ್ದು ಮನೆಯ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.
9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ರಾತ್ರಿ ಮಲಗಿರುವಾಗ ಸಿಲಿಂಡರ್ ಸೋರಿಕೆಯಾಗಿದೆ.ವಾಸನೆ ಕಂಡು ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ಹೇಳಲಾಗುತ್ತಿದೆ.ರಾಜಶ್ರೀ ನಿರ್ವಾಣಿ (42) ಅಶೋಕ ನಿರ್ವಾಣಿ (45) ಸೋಮನಗೌಡ (44)ದೀಪಾ (42) ನವೀನ (14), ವಿದ್ಯಾ (13) ಬಸನಗೌಡ ನಿರ್ವಾಣಿ( 9 ತಿಂಗಳು) ಇವರೆಲ್ಲರೂ ಗಾಯಗೊಂಡಿದ್ದು,ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಇವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನುಳಿದವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಂಕಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ