Breaking News

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ ಪೇ ಚರ್ಚಾ ಮೂಲಕ ನಗರದಲ್ಲಿ ಇರುವ ಪ್ರಭಾವಿ ಮುಖಂಡರ ಮನೆಗಳಿಗೆ ಭೇಟಿ ನೀಡಿ ಬೆಂಬಲ ಯಾಚಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಇವತ್ತು ಬೆಳಗಾವಿಯ ಕುವೆಂಪು ನಗರದಲ್ಲಿ ಕಾಣಿಸಿಕೊಂಡರು. ಬಿಜೆಪಿ ಮುಖಂಡ ಭೀಮಶಿ ಜಾರಕಿಹೊಳಿ ಅವರ ಮನೆಗೆ ಶೆಟ್ಟರ್ ಭೇಟಿ ನೀಡಿ ಬೆಂಬಲ ಯಾಚಿಸಿದ್ರು. ಭೀಮಶಿ ಜಾರಕಿಹೊಳಿ ಬೆಂಬಲದಿಂದ,ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್‌ಗೆ ಈಗ ಭೀಮ ಬಲ ಬಂದಂತಾಗಿದೆ. ಭೀಮಶಿ ಜಾರಕಿಹೊಳಿ ಅವರು ಶೆಟ್ಟರ್‌ಗೆ ಶಾಲು ಹೊದಿಸಿ ಮನೆಗೆ ಬರಮಾಡಿಕೊಂಡರು.ಭೀಮಶಿ ಜಾರಕಿಹೊಳಿಸಕ್ರಿಯ ರಾಜಕಾರಣದಲ್ಲಿ ಇರದಿದ್ದರೂ ಬೆಳಗಾವಿ ಕ್ಷೇತ್ರದಲ್ಲಿ ತಮ್ಮದೇ ಪ್ರಭಾವ ಹೊಂದಿದ್ದಾರೆ.2008 ರಲ್ಲಿ ಬಿಜೆಪಿ ಅಭ್ಯರ್ಥಿ ಆಗಿ ಗೋಕಾಕದಿಂದ ಕಣಕ್ಕಿಳಿದಿದ್ದ ಭೀಮಶಿ ಜಾರಕಿಹೊಳಿ,ಸಹೋದರ ರಮೇಶ್ ಜಾರಕಿಹೊಳಿ ವಿರುದ್ಧ ಕಡಿಮೆ ಮತಗಳ ಅಂತರದಿಂದ ಅವರು ಸೋತಿದ್ದರು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *