ಬೆಳಗಾವಿ, ಏ.೨೬(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ೫೦ ವರ್ಷದ ವ್ಯಕ್ತಿ(ಪಿ-೧೮೨) ಹಾಗೂ ಅವರ ಪತ್ನಿಯಾಗಿರುವ ೪೦ ವರ್ಷದ (ಪಿ-೧೯೨) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
ಇವರು ಏ.೩ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೫೪ ಜನರಲ್ಲಿ ಸೋಂಕು ಪತ್ತೆಯಾಗಿದೆ.
ಈ ಪೈಕಿ ನಾಲ್ಕು ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ. ಇದೀಗ ಒಟ್ಟಾರೆ ಆರು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.
***
,ಕ್ವಾರಂಟೈನ್ ಆದವರಿಗೆ ಬಿಡುಗಡೆಯ ಭಾಗ್ಯ…
ಸೊಂಕಿತರ ಸಂಪರ್ಕಕ್ಕೆ ಬಂದು ಬೆಳಗಾವಿ ನಗರದ ವಿವಿಧ ಲಾಡ್ಜ್ ಗಳಲ್ಲಿ ಕ್ವಾರಂಟೈನ್ ಆಗಿದ್ದ ಒಟ್ಟು 58 ಜನ ಶಂಕಿತರಿಗೆ ಇಂದು ಬಿಡುಗಡೆಯ ಭಾಗ್ಯ ಬಂದಿದೆ
ಮಚ್ಛೆ,ಬೆಳಗುಂದಿ,ಹಿರೇಬಾಗೇವಾಡಿ ಯ 58 ಜನರನ್ನು ಇಂದು ಬಿಡುಗಡೆ ಮಾಡಿ ಹದುನಾಲ್ಕು ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿದೆ. ಇವರ ರಿಪೋರ್ಟ್ ಎರಡು ಬಾರಿ ನೆಗೆಟೀವ್ ಬಂದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ.
ಇವತ್ತು ಪಾಸಿಟೀವ್ ಕೇಸ್ ಇಲ್ಲ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಯಾವ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ ಬೆಳಗಿನ ಹೆಲ್ತ್ ಬುಲಿಟೀನ್ ನಲ್ಲಿ ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕೇವಲ ಒಂದು ಪಾಸಿಟೀವ್ ಕೇಸ್ ಪತ್ತೆಯಾಗಿದೆ.