Breaking News

ಬೆಳಗಾವಿ ಜಿಲ್ಲಾಧಿಕಾರಿಗಳ ಸರ್ಕಾರಿ ಬಂಗಲೆಯ ಪೋಲೀಸ್ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಜಿಲ್ಲಾಧಿಕಾರಿ ನಿವಾಸದ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದ ಮುಖ್ಯದ್ವಾರದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೋಲೀಸ್ ಪೇದೆಯೊಬ್ಬ ಸಕ್ಯುರಿಟಿಗೆ ನೀಡಲಾಗಿದ್ದ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರಕಾಶ ಗುರುವಣ್ಣವರ (35) ಆತ್ಮತ್ಯೆ ಮಾಡಿಕೊಂಡ ಪೇದೆಯಾಗಿದ್ದು. ಕಿತ್ತೂರು ಸಮೀಪದ ಅಂಬಡಗಟ್ಟಿ ಗ್ರಾಮದವರಾಗಿದ್ದಾರೆ.

ಇವರು ಮನೋವ್ಯಾದಿಯಿಂದ ಬಳಲುತ್ತಿದ್ದರು,ಅದರ ಉಪಚಾರವನ್ನು ಪಡೆಯುತ್ತಿದ್ದರು. ನಿನ್ನೆ ರಾತ್ರಿ ಇವರ ಮನೆಯವರು ಸ್ಮಾರ್ಟ್ ಫೋನ್ ಕಸಿದುಕೊಂಡು ಸಾದಾ ಫೋನ್ ನೀಡಿದ್ದಕ್ಕಾಗಿ ಮನನೊಂದು ಈತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೋಲೀಸರು ಶಂಕಿಸಿದ್ದಾರೆ.

ಸ್ಥಳಕ್ಕೆ ನಗರ ಪೋಲೀಸ್ ಆಯುಕ್ತ ಲೋಕೇಶಕುಮಾರ್ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.

ನಿನ್ನೆ ಮದ್ಯರಾತ್ರಿ ಈ ಘಟನೆ ನಡೆದಿದ್ದು ಇಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ .

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *