ಕೊಳವೆಬಾವಿಗೆ ಬಿದ್ದಿದ್ದ ರೈತನ ಮೃತದೇಹ ಹೊರತೆಗೆಯಲಾಗಿದೆ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

 

ಬೆಳಗಾವಿ,  ರಾಯಬಾಗ ತಾಲ್ಲೂಕಿನ ಸುಲ್ತಾನಪುರದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ರೈತ ಲಕ್ಕಪ್ಪ ದೊಡಮನಿ ಅವರ ಮೃತದೇಹವನ್ನು ನಿರಂತರ ಕಾರ್ಯಾಚರಣೆ ಮೂಲಕ ಹೊರತೆಗೆಯಲಾಗಿದೆ.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ವತಃ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

ಘಟನೆಯ ಬಗ್ಗೆ ತನಿಖೆ ನಡೆದಿದ್ದು, ಆಕಸ್ಮಿಕವೋ ಅಥವಾ ಆತ್ಮಹತ್ಯೆಯೇ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎನ್.ಡಿ.ಆರ್.ಎಫ್. ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.
***

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *