ನೂತನ ರೈಲುನಿಲ್ದಾಣ ಕಾಮಗಾರಿ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಸಚಿವ ಸುರೇಶ್ ಅಂಗಡಿ ಸೂಚನೆ
ಬೆಳಗಾವಿ, ಜೂನ್ 4(ಕರ್ನಾಟಕ ವಾರ್ತೆ): ನಗರದ ನೂತನ ರೈಲುನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಗುರುವಾರ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಯು ನವೆಂಬರ್ 2020 ರ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕಾಮಗಾರಿ ನಿಧಾನಗೊಂಡಿರುತ್ತದೆ ಎಂದು ತಿಳಿಸಿದರು.
ಆದಾಗ್ಯೂ ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಮಾರ್ಚ್ 2021 ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೇಲ್ ವಿಕಾಸ ನಿಗಮ ಮತ್ತು ರೈಲ್ವೆ ಇಲಾಖೆಯ ಸ್ಥಳೀಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
***
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ