ಬೆಳಗಾವಿ- ಲಾಕ್‌ಡೌನ್‌ನಿಂದ ಉದ್ಯೋಗ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಂಕಷ್ಟೊಳಗಾದ ಬೆಳಗಾವಿಯ ನೇಕಾರ ಕೂಲಿಕಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ವಡಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ನೇಕಾರ ಕೂಲಿಕಾರ್ಮಿಕ ಸುಜಿತ್ ಉಪರಿ(38) ನೇಣಿಗೆ ಶರಣಾಗಿದ್ದಾನೆ.
ಬೆಳಗಾವಿಯ ವಡಗಾವಿಯ ಲಕ್ಷ್ಮೀ ನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲಾಕ್‌ಡೌನ್ ಹಿನ್ನೆಲೆ ಬೆಳಗಾವಿಯಲ್ಲಿ ವಿದ್ಯುತ್ ಮಗ್ಗಗಳು ಬಂದ್ ಆಗಿದ್ದವು. ಕೆಲಸ ಇಲ್ಲದೇ ಕೈಸಾಲ ಮಾಡಿದ್ದ ನೇಕಾರ ಕಾರ್ಮಿಕ ಸುಜಿತ್. ವಿದ್ಯುತ್ ಮಗ್ಗವಿದ್ದ ನೇಕಾರರ ಬಳಿ ಕೆಲಸಕ್ಕೆ ಹೋಗುತ್ತಿದ್ದ , ದುಡಿಯಲು ಕೆಲಸವಿಲ್ಲದೇ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದ. ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ ನೇಕಾರ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ