ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ನಗರದಲ್ಲಿ ರಾಜ್ಯಾಸಭಾ ಸದಸ್ಯ ಪ್ರಭಾಕರ್ ಕೊರೆ ಮತ್ತು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಲಿಂಗರಾಜ ಕಾಲೇಜು ಆವರಣದಲ್ಲಿ ಸಮಾವೇಶಗೊಂಡ ಶಿಕ್ಷಕರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಸಾಗಿ ಮನವಿ ಸಲ್ಲಿಸಿದರು.
ಮಹಾಂತೇಶ ಕವಟಗಿಮಠ ಮಾತನಾಡಿ ಖಾಸಗಿ ಶಿಕ್ಷಣ ಸಂಸ್ಥೆ ಸೇವೆ ಸಲ್ಲಿಸುತ್ತಿರುವ ನೌಕರರಿಗೂ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ವೇತನ ತಾರತಮ್ಯ ನಿವಾರಿಸಬೇಕು. ವೇತನ ಬಡ್ತಿ ಸಮಸ್ಯೆ, ಹೊಸ ಪಿಂಚಣಿ ಪದ್ದತಿ ರದ್ದುಗೊಳಿಸುವುದು ಸೇರಿದಂತೆ ವಿವಿದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಪ್ರಭಾಕರ್ ಕೋರೆ ಮಾತನಾಡಿ ಬೋದಕ ಮತ್ತು ಬೋದಕೇತರ ಸಿಬ್ಬಂದಿ ನೇಮಿಸಿಕೊಳ್ಳಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ಕೊಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರು ಸರ್ಕಾರದ ಮುಂದೆ ಮಂಡಿಸಿದ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೆಕು. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ನೀಲಕಂಠ ಸ್ವಾಮೀಜಿ, ಗುರುಲಿಂಗ ಜಂಗಮ ಸ್ವಾಮಿಜಿ, ಬ್ರಹ್ಮನಂದ ಅಜ್ಜನವರು ಸೇರಿದಂತೆ ಸಾವಿರಾರು ಜನ ಶಿಕ್ಷಕ ಶಿಕ್ಷಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ:
Check Also
ಸಂಘ ದೋಷ, ಗೆಳೆಯನ ಜೊತೆ ಸೇರಿ ಗಂಡನ ಮರ್ಡರ್ ಮಾಡಲು ಸುಫಾರಿ ಕೊಟ್ಟ ಹೆಂಡತಿ…..!!!
ಬೆಳಗಾವಿ-ಅದೊಂದು ಸುಖ ಸಂಸಾರವಾಗಿತ್ತು ಸಾಲಕ್ಕಾಗಿ ಆ ಸಂಘ ಈ ಸಂಘವೆಂದು ಅಲೆದಾಡಿದ ಮನೆಯ ಯಜಮಾನಿ ಯುವಕನ ಜೊತೆ ಗೆಳೆತನ ಮಾಡಿ …