ಬೆಳಗಾವಿ-ಇಂಡಿಗೋ ಸಂಸ್ಥೆಯು ದಿನಾಂಕ 20-12-2024 ರಿಂದ ಬೆಂಗಳೂರು ಬೆಳಗಾವಿ ಬೆಂಗಳೂರು ನಡುವೆ ವಿಮಾನ ಹಾರಾಟವನ್ನು ಪುನಃ ಆರಂಭಿಸಲಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಹಾಗೂ ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ಇವರು ವಿಷಯ ತಿಳಿಸುತ್ತಾ ಸಂತಸ ವ್ಯಕ್ತಪಡಿಸಿದರು.
ಇಂಡಿಗೋ ಸಂಸ್ಥೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ದೂರವಾಣಿಯಲ್ಲಿ ವಿಷಯ ತಿಳಿಸಿದ್ದಾಗಿ, ದಿನಾಂಕ 20-12-2024 ರಂದು ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 6:30ಕ್ಕೆ ಮತ್ತು ಬೆಳಗಾವಿಯಿಂದ ಬೆಂಗಳೂರಿಗೆ ಬೆಳಿಗ್ಗೆ 8:30ಕ್ಕೆ ತನ್ನ ಸಂಚಾರವನ್ನು ಮತ್ತೆ ಪ್ರಾರಂಭಿಸಲಿದೆ.
ಪ್ರಸ್ತಾಪಿತ ವಿಷಯವಾಗಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಕಳೆದ ತಿಂಗಳು ನವದೆಹಲಿಯಲ್ಲಿ ಇಂಡಿಗೋ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ಡಿಸೆಂಬರ್ 2024 ರ ಮಾಹೆಯಲ್ಲಿ ಈ ವಿಮಾನ ಸೇವೆಯನ್ನು ಪ್ರಾರಂಭಿಸುವುದಾಗಿ ಅವರು ಆಶ್ವಾಸನೆ ನೀಡಿರುವಂತೆ ಸದ್ಯ ಬೆಂಗಳೂರು ಬೆಳಗಾವಿ ಬೆಂಗಳೂರು ಮಧ್ಯ ವಿಮಾನ ಸೇವೆ ಆರಂಭಗೊಂಡಿದೆ.
ಈ ವಿಮಾನ ಸೇವೆ ಇನ್ನೂ ನಿಗದಿತ ದಿನಾಂಕದ ಹಾಗೂ ಬೆಳಗಾವಿಯಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ಆರಂಭಗೊಳ್ಳುವ ಮೊದಲು ಈ ವಿಮಾನ ಸೇವೆ ಪ್ರಾರಂಭಿಸುವ ಬಗ್ಗೆ ಪ್ರಯತ್ನ ಮಾಡುವುದಾಗಿ ಸಂಸದರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕೆ. ಆರ್ ನಾಯ್ಡು ಇವರಲ್ಲಿ ಮತ್ತು ಇಂಡಿಗೋ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ತಮ್ಮ ಅಭಿನಂದನೆಗಳನ್ನು ತಿಳಿಸುವುದಾಗಿ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ