ಬೆಳಗಾವಿ-ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕ ಸಂಜಯ ಪಾಟೀಲ ಬೆಳಗಾವಿ ತಾಲೂಕಾ ಪಂಚಾಯತಿಯಿ ಆಡಳಿತದಲ್ಲಿ ಹಸ್ತ ಕ್ಷೇಪ ಮಾಡುತ್ತಿದ್ದು ಅವರು ಹಿಟ್ಲರ್ ನಂತೆ ನಡೆದು ಜಿಲ್ಲಾ ಪಂಚಾಯತಿ ಹಾಗೂ ತಾಲೂಕಾ ಪಂಚಾಯತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕಾಮಗಾರಿಗಳನ್ನು ಉದ್ಘಾಟಿಸಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ಬೆಳಗಾವಿ ತಾಲೂಕಾ ಪಂಚಾಯತಿ ಅಧ್ಯಕ್ಷ ಶಂಕರಗೌಡಾ ಪಾಟೀಲ ಆರೋಪಿಸಿದ್ದಾರೆ
ಅವರು ಶನಿವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಶಾಸಕ ಸಂಜಯ ಪಾಟೀಲ ತಮ್ಮ ಅನುದಾನವನ್ನು ಅವರ ಮನಸ್ಸಿಗೆ ಬಂದಂತೆ ಖರ್ಚು ಮಾಡಲಿ ಆದರೆ ರಾಜ್ಯ ಸರ್ಕಾರ ಬೆಳಗಾವಿ ಗ್ರಾಮೀನ ಮತಕ್ಷೇತ್ರದ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮಂಜೂರು ಮಾಡಿದೆ ಶಾಸಕ ಸಂಜಯ ಪಾಟೀಲ ಸ್ಥಳಿಯ ಜಿಲ್ಲಾ ಪಂಚಾಯತಿ ಸದಸ್ಯರ ತಾಪಂ ಸದಸ್ಯರ ಗಮನಕ್ಕೆ ತರದೇ ಏಕಾಂಗಿಯಾಗಿ ಕಾಮಗಾರಿಗಳಿಗೆ ಪೂಜೆ ನೆರವೇರಿಸುತ್ತಿದ್ದು ಈ ಕುರಿತು ಮೇಲಾಧಕಾರಿಗಳಿಗೆ ಹಾಗು ಜಿಲ್ಲಾಮಂತ್ರಿಗಳಿಗೆ ದೂರು ನೀಡಲಾಗಿದೆ.ಎಂದು ಶಂಕರಗೌಡಾ ಪಾಟೀಲ ತಿಳಿಸಿದ್ದಾರೆ
ಶಾಸಕ ಸಂಜಯ ಪಾಟೀಲ ಬೆಳಗಾವಿ ತಾಲೂಕಾ ಪಂಚಾಯತಿಯಲ್ಲಿ ನಿರಂತರವಾಗಿ ಹಸ್ತಕ್ಷೇಪ ಮಾಡುತ್ತಿರುವದರಿಂದ ಮನನೊಂದು ರಾಜೀನಾಮೆ ನೀಡಿದ್ದೆ ಆದರೆ ಕಾಂಗ್ರೆಸ್ ಪಕ್ಷದ ನಾಯಕರು ಹಾಗು ಜಿಲ್ಲಾ ಮಂತ್ರಿಗಳ ಮನವಿ ಮೇರೆಗೆ ರಾಜೀನಾಮೆ ವಾಪಸ್ ಪಡೆದಿದ್ದೇನೆ ಆದಷ್ಟು ಬೇಗನೆ ರಾಜ್ಯ ಸರ್ಕಾರದ ಬಳಿ ಬೆಳಗಾವಿ ತಾಲೂಕಾ ಪಂಚಾಯತಿಯಿಂದ ನಿಯೋಗ ತೆಗೆದುಕೊಂಡು ಹೋಗಿ ಬೆಳಗಾವಿ ತಾಲೂಕಿನ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗುವದು ಎಂದು ಶಂಕರಗೌಡಾ ಪಾಟೀಲ ತಿಳಿಸಿದರು
Check Also
ವಕ್ಫ್ ವಿವಾದ,ಇಂದು ಬೆಳಗಾವಿಯಲ್ಲಿ ಒಂದೇ ದಿನ ಪರ,ವಿರೋಧ ಧರಣಿ
ಬೆಳಗಾವಿ- ವಕ್ಫ್ ಬೋರ್ಡ್ ನಿಂದ ರೈತರಿಗೆ ಜಾರಿಯಾಗಿರುವ ನೋಟೀಸ್ ಗಳ ಕುರಿತು ರಾಜ್ಯಾದ್ಯಂತ ವಿವಾದ ಸೃಷ್ಠಿಯಾಗಿದ್ದು ಈ ಕುರಿತು ಇವತ್ತು …