Breaking News

ಹೆಲ್ಮೇಟ್ ಕಾರ್ಯಾಚರಣೆಯಲ್ಲಿ ಪೇದೆಗೆ ಗಾಯ

ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದ ಯುವಕನನ್ನು ಹಿಡಿಯಲು ಹೋಗಿ ಪೊಲೀಸ್ ಪೇದೆಯೊಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಚನ್ನಮ್ಮ ವೃತ್ತದ ಬಳಿ ಸಂಚಾರ ನಿರ್ವಹಣೆ ಮಾಡುತ್ತಿದ್ದ ಪೇದೆ ಬಿ.ಎ. ಹಳಬರ ಗಾಯಗೊಂಡಿದ್ದಾರೆ. ಘಟನೆಗೆ ಕಾರಣವಾದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಯುವಕನಿಗೆ ಬೈಕ್ ನಿಲ್ಲಿಸುವಂತೆ ಪೇದೆ ಹಳಬರ ಅವರು ಸೂಚನೆ ನೀಡಿದ್ದಾರೆ. ಆದರೆ, ಬೈಕ್ ನಿಲ್ಲಿಸದೆ ಉದ್ದಟತನ ತೋರಿದ ಯುವಕ ಬೈಕಿನೊಂದಿಗೆ ಪರಾರಿಯಾಗಲು ಯತ್ನಿಸಿದಾಗ ಹಳಬರ ಅವರು ಬೈಕನ್ನು ಹಿಡಿಯಲು ಹೋಗಿ ಬಿದ್ದು ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.

ಮಾಡಿದ ತಪ್ಪಿಗೆ ದಂಡ ಕಟ್ಟದೆ ಬುದ್ದಿವಂತಿಕೆ ತೋರಲು ಹೋದ ಯುವಕ ಈಗ ಪೊಲೀಸರ ಅತಿಥಿಯಾಗಿ ಪರಿತಪಿಸುತ್ತಿದ್ದಾನೆ.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *