ಬೆಳಗಾವಿ: ಚಳಿಗಾಲದ ಅಧಿವೇಶನದ ಮೊದಲ ದಿನ ಬರ ಪರಿಹಾರ ಕಾಮಗಾರಿಗಳ ನಿಧಾನ ಗತಿಯನ್ನು ವಿರೋಧಿಸಿ ಪ್ರತಿ ಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡರು
ಮದ್ಯಾನ್ಹದ ವೇಳೆಗೆ ವಿರೋದ ಪಕ್ಷದ ನಾಯಕ ಜಗದೀಶ ಶೆಟ್ಟರ ಮಾತನಾಡಿ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಲು ಮುಂದಾದ ರೈತರನ್ನು ಬಂಧಿಸಿರುವ ಸರ್ಕಾರ ರೈತರ ವಿರೋಧಿಯಾಗಿದೆ ಅಧಿಕಾರಿಗಳು ಮಂತ್ರಿಗಳ ಮಾತು ಕೇಳುತ್ತಿಲ್ಲ ಅಧಿಕಾರಿಗಳ ಜಿಡ್ಡು ಇಳಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿಲ್ಲ ರಾಜ್ಯದಲ್ಲಿ ಬರಪರಿಹಾರ ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಅಲ್ಲಲ್ಲಿ ಬಂಧಿಸಲಾಗಿದೆ ಸರ್ಕಾರ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಜಗದೀಶ ಶೆಟ್ಟರ ಒತ್ತಾಯಿಸಿದರು.
ರೈತರು ಸಂಕಷ್ಟದಲ್ಲಿದ್ದಾರೆ ಸರ್ಕಾರ ಕೂಡಲೇ ರೈತರ ಸಾಲವನ್ನು ಮನ್ನಾ ಮಾಡಬೇಕು ಕೇಂದ್ರ ಸರ್ಕಾರವೇ ರೈತರ ಸಾಲ ಮನ್ನಾ ಮಾಡಲಿ ಎಂದು ಸರ್ಕಾರ ವಿತಂಡವಾದವನ್ನು ಮಂಡಿಸುತ್ತಿದೆ ಸರ್ಕಾರ ಮೊದಲು ತನ್ನ ಸಾಮಥ್ರ್ಯದ ರೈತರ ಸಾಲವನ್ನು ಮನ್ನಾ ಮಾಡಲಿ ನಂತರ ಉಳಿದ ಸಾಲ ಮನ್ನಾ ಮಾಡವಂತೆ ಕೇಂದ್ರಕ್ಕೆ ಮನವಿ ಮಾಡಲಿ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡರು.
ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ನಿಭಾಯಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಈ ವಿಷಯದಲ್ಲಿ ಅಸಡ್ಡೆ ತೊರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
ಬರದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ವಿದ್ಯುತ್ ಅಭಾವದಿಂದ ಪದೆ ಪದೆ ಲೋಡ್ ಶೆಡ್ಡಿಂಗ್ ಆಗುತ್ತಿರುವುದರಿಂದ ರೈತರ ಬದುಕು ಕಷ್ಟವಾಗಿದೆ ಸರ್ಕಾರ ಕೂಡಲೆ ವಿದ್ಯುತ್ ಸಮಸ್ಯೆಯನ್ನು ಬಗೆ ಹರಿಸಬೇಕು ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಬೇಕು ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಧಾರವಾಡ ಜಿಲ್ಲೆಯ ರೈತರು ಒತ್ತಾಯಿಸಿದ್ದು ಈ ಕುರಿತು ನೀರಿನ ಸಂಗ್ರಹದ ಮಟ್ಟವನ್ನು ಪರೀಶಿಲಿಸಿ ರೈತರ ಬೇಡಿಕೆಯಂತೆ ನೀರು ಬಿಡುಗಡೆ ಮಾಡಬೇಕೆಂದು
ಅಧಿವೇಶನದ ಮೊದಲ ದಿನ ಪ್ರತಿ ಪಕ್ಷಗಳು ಬರ ಪರಿಸ್ಥಿತಿಯ ಕುರಿತು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ