ಬೆಳಗಾವಿ, ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಪಾರ್ಕ್ ಸ್ಥಾಪಿಸಲು ಮಾಹಿತಿ ತಂತ್ರಜ್ಞಾನ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಗಳ ಉನ್ನತ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಸೂಚಿಸಿದರು.
ಸದಸ್ಯ ಮಹಾಂತೇಶ ಕವಟಗಿಮಠ ಅವರು ಕೇಳಿದ ಪ್ರಶ್ನೆಗೆ ಇದು ಕೈಗಾರಿಕೆ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಯಾಗಿದೆ ಆದ್ದರಿಂದ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ಲಿಖಿತ ಉತ್ತರ ನೀಡಿದ್ದನ್ನು ಪ್ರಸ್ತಾಪಿಸಿ ಸಭಾಪತಿಗಳು ಈ ವಿಷಯ ತಿಳಿಸಿದರು. ಸರ್ಕಾರದ ಇಲಾಖೆಗಳ ನಡುವೆ ಸಮನ್ವಯ ಇದ್ದರೆ ಯೋಜನೆಗಳು ತ್ವರಿತ ಅನುಷ್ಠಾನಗೊಳ್ಳುತ್ತವೆ ಎಂದರು.
ಬೆಳಗಾವಿ ಐ.ಟಿ. ಪಾರ್ಕ್ ಕಳೆದ ಸಾಲಿನಲ್ಲಿ ತಾವು ಸಚಿವರಾಗಿದ್ದ ವೇಳೆ ಮಂಜೂರಾತಿ ದೊರೆತಿದೆ ಎಂದು ಸದಸ್ಯ ಎಸ್.ಆರ್. ಪಾಟೀಲ ಹೇಳಿದಾಗ ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಮಧ್ಯ ಪ್ರವೇಶಿಸಿ ಬೆಳಗಾವಿಯ ಕೈಗಾರಿಕಾ ಪಾರ್ಕ್‍ನಲ್ಲಿ ಐ.ಟಿ. ಪಾರ್ಕ್ ಸ್ಥಾಪಿಸಬೇಕಾಗಿದೆ. ಆದ್ದರಿಂದ ಪ್ರಶ್ನೆಯನ್ನು ಕೈಗಾರಿಕಾ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದರು.
Check Also
ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ
ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …