ಬೆಳಗಾವಿ-
ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ತರುವ ವಿಧೇಯಕ ವಿಧಾನ ಮಂಡಲದಲ್ಲಿ ಮಂಡಿಸುವ ಮುನ್ನ ವೈದ್ಯಕೀಯ ಸಂಘದ ಪದಾಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚಿಸಿ ವಿಧೇಯಕವನ್ನು ಮಂಡನೆ ಮಾಡಲಾಗುವುದು, ಪ್ರಸಕ್ತವಾಗಿ ವೈದ್ಯರು ನಡೆಸುತ್ತಿರುವ ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳ ವೈದ್ಯರುಗಳಿಗೆ ಮನವಿ ಮಾಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಚಿತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕುರಿತು ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆ ಬಗ್ಗೆ ಜಂಟಿ ಸದನ ಸಮಿತಿ ವರದಿ ನೀಡಿದೆ. ಈ ಕುರಿತಂತೆ ಅಗತ್ಯ ಮಾತುಕತೆ ನಡೆಸಿ, ಸಾಧಕ ಬಾಧಕಗಳ ಕುರಿತು ಅಧ್ಯಯನ ಮಾಡಿ, ಮಂಡನೆ ಮಾಡಲಾಗುವುದು ಎಂದರು.
ವೈದ್ಯಕೀಯ ಶಿಕ್ಷಣ ಸಂಘದ ಅಧ್ಯಕ್ಷ ಡಾ. ರವೀಚಿದ್ರ ಈ ಕುರಿತಂತೆ ಮುಖ್ಯಮಂತ್ರಿಯವರೊಂದಿಗೆ ಸುದೀರ್ಘ ಸಮಾಲೋಚನೆ ಮಾಡಿದ್ದು, ರಾಜ್ಯ ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ಮುಷ್ಕರವನ್ನು ಕೈಬಿಡುವ ಬಗ್ಗೆ ಸಂಘದ ಸಭೆಯಲ್ಲಿ ಚರ್ಚಿಸಿ ಪ್ರಕಟಿಸಲಾಗುವುದು ಎಂದರು.