Breaking News

ಡಿಸೆಂಬರ್ 10 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಳಗಾವಿ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 10ರಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ ನಡೆಯುವ ಸಾಧ್ಯತೆ ಇದೆ.

ಹತ್ತು ದಿನಗಳ ಕಲಾಪ ನಡೆಸಲು ತೀರ್ಮಾನಿಸಲಾಗಿದ್ದು ಮುಂದಿನ ಸೋಮವಾರ ನಡೆಯುವ ಸಚಿವ ಸಭೆಯಲ್ಲಿ ಈ ನಿರ್ಧಾರಕ್ಕೆ ಅಧಿಕೃತ ವಾಗಿ ನಿರ್ಣಯ ದೊರೆಯಲಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ನಂತರ ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಡಿಸೆಂಬರ್ ನಲ್ಲಿ ನಡೆಯುವ ಚಳಿಗಾಲ ಅಧಿವೇಶನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *