Breaking News

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ನಾಯಕರ ಕಿಡಿನುಡಿ…

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಜೈಲು ಕಂಡು ಬಂದವರು ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿಕೆ ನೀಡಿದ್ದರು. ಸಿಎಂ ಹೇಳಿಕೆಗೆ ರಾಜ್ಯ ಬಿಜೆಪಿಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರದ ಜನಪರ ಆಡಳಿತವನ್ನು ಸಹಿಸಿಕೊಳ್ಳಲಾಗದ ಸಿದ್ದರಾಮಯ್ಯ  ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರ ಬಗ್ಗೆ ನನಗೆ ಆಕ್ರೋಶ ಇಲ್ಲ ಹೊರತಾಗಿ ಕನಿಕರ ಮೂಡುತ್ತಿದೆ. ಎಂದು ಬಿಜೆಪಿ ವಕ್ತಾರ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಸುವರ್ಣ ವಿಧಾನ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಸಿದ್ದರಾಮಯ್ಯನವರು ರಾಜಕೀಯ ಮುತ್ಸದ್ಧಿಗಳು. ಈ ರೀತಿ ಹೇಳಿಕೆ ನೀಡಿರುವ ಅವರ ಮನೋಸ್ಥಿತಿ ನನಗೆ ಅರ್ಥವಾಗುತ್ತಿಲ್ಲ. ಇಡೀ ಪ್ರಪಂಚವೇ ಮೋದಿ ಅವರನ್ನು ಹೊಗಳುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಇಂತಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದರು

ಸಿದ್ದರಾಮಯ್ಯನರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ. ಇಡೀ ಪ್ರಪಂಚದ ಎಲ್ಲ ದೇಶಗಳು ಮೋದಿ ಅವರ ರಾಜಕೀಯ ನಡೆಗಳನ್ನು ಒಪ್ಪಿಕೊಂಡಿವೆ. ಮೋದಿ ಅವರನ್ನು ಒಪ್ಪಿಕೊಳ್ಳಲಾಗದವರು ಅಂದ್ರೆ ಒಂದು ಪಾಕಿಸ್ತಾನ ಹಾಗೂ ಸಿದ್ದರಾಮಯ್ಯ ಮಾತ್ರ ಎಂದು ಈಶ್ವರಪ್ಪ ತಿರುಗೇಟು ನೀಡಿದರು.

ಅದರಂತೆ ಸಿದ್ದರಾಮಯ್ಯನವರ  ಹೇಳಿಕೆಗೆ ಉತ್ತರ ನೀಡಿದ ವಿಧಾನ ಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೇಲಿನ ಆರೋಪಗಳು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ಆಗಿ ಕ್ಲೀನ್ ಚಿಟ್ ದೊರೆತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರ ಕ್ಷಮೆ ಕೋರಬೇಕು ಎಂದರು

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ನ್ಯಾಯಾಲಯದಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ ಎಂಬ ಕಾರಣಕ್ಕೆ ಅವರು ನಿರಪರಾಧಿ ಆಗೋದಿಲ್ಲ ಎಂದರು

 

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *