ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತಿಯ ಸಾಮಾನ್ಯ ಸಭೆಗೆ ಬಾರದ ಅಧಿಕಾರಗಳ ವಿರುದ್ಧ ಕ್ರಮ ಜರುಗಿಸುವಂತೆ ಸದಸ್ಯರು ಒತ್ತಾಯಿಸಿದರು
ಸಭೆ ಆರಂಭವಾಗುತ್ತಿದ್ದಂತೆಯೇ ಜಿಪಂ ಸದಸ್ಯ ಕಾಗಲ್ ಮಾತನಾಡಿ ಅಧಿಕಾರಿಗಳು ಸಾಮಾನ್ಯ ಸಭೆಗೆ ಬಾರದೇ ಅವಮಾನ ಮಾಡುತ್ತಿದ್ದಾರೆ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾತನಾಡಿ ಸಭೆಗೆ ಬಾರದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗುವದು ಅವರು ನೀಡುವ ಉತ್ತರ ತೃಪ್ತಿದಾಯಕ ಇಲ್ಲದಿದ್ದರೆ ಕಾನೂನು ಪ್ರಕಾರ ಶಿಸ್ತಿನ ಕ್ರಮ ಜರುಗಿಸಲಾಗುವದು ಎಂದು ಭರವಸೆ ನೀಡಿ ಚರ್ಚೆಗೆ ತೆರೆ ಎಳೆದರು
ಶಂಕರ ಮಾಡಲಗಿ ಅವರು ಶೂ ಹಗರಣದ ವರದಿಯ ವಿಷಯವನ್ನು ಪ್ರಸ್ತಾಪಿಸಿದಾಗ ಅದಕ್ಕೆ ಕೆಲವು ಸದಸ್ಯರು ಅಕ್ಷೇಪ ವ್ಯೆಕ್ತ ಪಡಿಸಿದರು ಜಿಲ್ಲೆಯಲ್ಲಿ ಭೀಕರ ಬರಗಾಲವಿದೆ ಈ ಬಗ್ಗೆ ಚರ್ಚೆ ಮಾಡೋಣ ಎಂದಾಗ ಶಂಕರ ಮಾಡಲಗಿ ಅದಕ್ಕೆ ಉತ್ತರ ನೀಡುತ್ತ ಶೂ ಹಗರಣದಲ್ಲಿ ೧೪ ಕೋಟಿ ಅವ್ಯೆವಹಾರ ನಡೆದಿದೆ ಇನ್ನುವರೆಗೆ ತನಿಖಾ ವರದಿ ಬಂದಿಲ್ಲ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿಲ್ಲ ಈ ಕುರಿತು ಚರ್ಚೆಗೆ ಅವಕಾಶ ಸಿಗದಿದ್ದರೆ ಧರಣಿ ಮಾಡುವೆ ಎಂದರು
ಸದಸ್ಯರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು ಅಧಿಕಾರಿಗಳು ಸದಸ್ಯರಿಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯೆಕ್ತಪಡಿಸಿದರು