Breaking News
Home / Breaking News / ಬೆಳಗಾವಿ ಜಿಲ್ಲಾಡಳಿತದ ಕಾರ್ಯಕ್ಕೆ, ಸಿಎಂ ಯಡಿಯೂರಪ್ಪ ಮೆಚ್ಚುಗೆ

ಬೆಳಗಾವಿ ಜಿಲ್ಲಾಡಳಿತದ ಕಾರ್ಯಕ್ಕೆ, ಸಿಎಂ ಯಡಿಯೂರಪ್ಪ ಮೆಚ್ಚುಗೆ

ಬೆಳಗಾವಿ,-ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಸೇರಿದಂತೆ ಯಾವುದೇ ರೀತಿಯ ತೊಂದರೆ ಇದ್ದರೆ ತಕ್ಷಣ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್-೧೯ ನಿಯಂತ್ರಣ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬುಧವಾರ (ಏ.೮) ಸಂಜೆ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಅವರು ಮಾತನಾಡಿದರು.

ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ, ಜನಸಾಮಾನ್ಯರಿಗೆ ಅಗತ್ಯವಿರುವ ದಿನಸಿ, ತರಕಾರಿಗಳು ಮತ್ತಿತರ ಸಾಮಗ್ರಿಗಳ ಸರಬರಾಜು ವ್ಯವಸ್ಥೆಯಲ್ಲಿ ಅನಾನುಕೂಲ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್-೧೯ ಸೋಂಕು ಹರಡದಂತೆ ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದಾದ ಬಳಿಕ ವಿಡಿಯೋ ಸಂವಾದ ಮುಂದುವರಿಸಿದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು, ರಾಜ್ಯದಲ್ಲಿ ಇನ್ನೂ ಹೆಚ್ಚಿನ ಜನರ ಗಂಟಲು ದ್ರವದ ಮಾದರಿಯನ್ನು ಪರಿಶೀಲಿಸಬೇಕು. ಇದಲ್ಲದೇ ಪಾಸಿಟಿವ್ ಪ್ರಕರಣ ದೃಢಪಟ್ಟಿರುವ ಕಂಟೈನ್ಮೆಂಟ್ ಝೋನ್ ನಲ್ಲಿ ಇರುವ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ನಡೆಸಬೇಕು ಎಂದು ತಿಳಿಸಿದರು.
ಐವತ್ತು ವರ್ಷ ಮೇಲ್ಪಟ್ಟಿರುವವರ ತಪಾಸಣೆಗೆ ಆದ್ಯತೆ ನೀಡಬೇಕು. ರ್ಯಾಪಿಡ್ ಟೆಸ್ಟಿಂಗ್ ಕಿಟ್ ಶೀಘ್ರದಲ್ಲಿಯೇ ಪೂರೈಕೆಯಾಗಲಿವೆ ಎಂದರು.

ಜೀವ ಅಮೂಲ್ಯ-ಅತ್ಯುತ್ತಮ ಚಿಕಿತ್ಸೆ ನೀಡಲು ಸೂಚನೆ:

ಸೋಂಕು ದೃಢಪಟ್ಟಿರುವ ಪ್ರತಿಯೊಬ್ಬ ವ್ಯಕ್ತಿಯ ಜೀವನ ಅಮೂಲ್ಯ. ಆದ್ದರಿಂದ ಎಲ್ಲರಿಗೂ ಅತ್ಯುತ್ತಮ ಚಿಕಿತ್ಸೆ ನೀಡಬೇಕು. ಅದರಲ್ಲೂ ೬೦ ವರ್ಷ ಮೇಲ್ಪಟ್ಟವರಿಗೆ ವಿಶೇಷ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೋಂಕಿನ ಲಕ್ಷಣಗಳು ಹೊಂದಿರುವ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಿರುವ ಮಾಹಿತಿಯನ್ನು ಮುಚ್ಚಿಡುವ ಖಾಸಗಿ ಆಸ್ಪತ್ರೆ ಅಥವಾ ವೈದ್ಯರ ವಿರುದ್ಧ ಪ್ರಕರಣ ದಾಖಲಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮತ್ತಿತರರು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು
***

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *