ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ ಶೂಟೌಟ್ ನಡೆಸಿ ಮಹಿಳೆಯ ಕೊಲೆ
ಚಿಕ್ಕೋಡಿ: ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈಗಾಗಲೇ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಶೈಲಾ ನಿರಂಜನ ಸುಭೇದಾರ (56) ಎಂಬುವವರ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ.ಈ ವೇಳೆ ಆರೋಪಿಗಳು ಮಹಿಳೆಯ ತಲೆಗೆ ಪಿಸ್ತೂಲಿನಿಂದ ಶೂಟ್ ಮಾಡಿ ಪರಾರಿ ಆಗಿದ್ದಾರೆ. ಇತ್ತ ಕೊಲೆಯಾದ ಮಹಿಳೆ ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರಂತೆ. ಪ್ರಾಥಮಿಕ ಮಾಹಿತಿ ಪ್ರಕಾರ ಕೊಲೆಗೆ ಬಡ್ಡಿ ವ್ಯವಹಾರ ಕಾರಣ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					