Breaking News
Home / Breaking News / ಇವತ್ತು ಬೆಳಗಾವಿಯಲ್ಲಿ ಜಬರದಸ್ತ್ ಹೆಲ್ತ್ ಚೆಕಪ್ ಕ್ಯಾಂಪ್ ನಡೀತು..

ಇವತ್ತು ಬೆಳಗಾವಿಯಲ್ಲಿ ಜಬರದಸ್ತ್ ಹೆಲ್ತ್ ಚೆಕಪ್ ಕ್ಯಾಂಪ್ ನಡೀತು..

ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳ

ಆಯುಷ್ಮಾನ್ ಆರೋಗ್ಯ ವಿಮೆಯ ಸದುಪಯೋಗ ಪಡೆದುಕೊಳ್ಳಿ: ಸಂಸದೆ ಮಂಗಳಾ ಅಂಗಡಿ

ಬೆಳಗಾವಿ, ಏ.29(ಕರ್ನಾಟಕ ವಾರ್ತೆ): ದೇಶದಲ್ಲಿಯೇ ಅತ್ಯಂತ ದೊಡ್ಡ ಆರೋಗ್ಯ ವಿಮೆ ಆಯುಷ್ಮಾನ್ ಭಾರತ ಯೋಜನೆಯನ್ನು ಜಾರಿ ತರಲಾಗಿದೆ. ಈ ಆರೋಗ್ಯ ವಿಮೆಯಿಂದ ಅನೇಕ ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಹಾಗೂ ಗರ್ಭಿಣಿ ಮಹಿಳೆಯರು ಕೂಡ ಇದರ ಲಾಭವನ್ನು ಪಡೆಯಬಹುದಾಗಿದೆ ಹಾಗಾಗಿ ಎಲ್ಲರೂ ಆಯುಷ್ಮನ್ ಆರೋಗ್ಯ ವಿಮೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಲೋಕಸಭಾ ಸಂಸದೆ ಮಂಗಳಾ ಅಂಗಡಿ ತಿಳಿಸಿದರು.

ನಗರದ ವಡಗಾವಿ ಮಾಧವಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ (ಏ.29) ನಡೆದ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಾ ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ರಾಷ್ಟೀಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಸರಕಾರ ಆಯೋಜಿಸಿದ ಈ ಆರೋಗ್ಯ ಮೇಳದ ಸದುಪಯೋಗವನ್ನು ಎಲ್ಲಾ ಜನರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ಅಭಯ್ ಪಾಟೀಲ್ ಮಾತನಾಡಿ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ನಿರ್ವಹಿಸಿದ ಕರ್ತವ್ಯ ಶ್ಲಾಘನೀಯವಾಗಿದೆ.

ಕೋವಿಡ್ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಜನರ ಪಾಲಿಗೆ ದೇವರಾದರು. ಕೋವಿಡ್ ಕಷ್ಟದ ಸಂದರ್ಭದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಜನರ ಪ್ರಾಣ ರಕ್ಷಣೆಗಾಗಿ ಹೋರಾಡಿದ್ದಾರೆ.

ಮೂರನೇ ಅಲೆ ಅತ್ಯಂತ ಕೆಟ್ಟದಾಗಿದ್ದು, ಲಸಿಕೆ ಹಾಕಿಸಿಕೊಂಡಿದ್ದರಿಂದ ಯಾವುದೇ ಪರಿಣಾಮ ಆಗಲಿಲ್ಲ. ಹಾಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದರು.

ಕೇಂದ್ರ ಸರಕಾರ ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿದ್ದರಿಂದ ಇಂದು ದೇಶಾದ್ಯಂತ ಈ ಕಾರ್ಯಕ್ರಮ ನಡೆಯುತ್ತಿದೆ. ಬೆಳಗಾವಿಯಲ್ಲಿ ಪೂರ್ವ ನಿಯೋಜಿತವಾಗಿ ಈ ಕುರಿತಂತೆ ಸಭೆ ನಡೆಸಲಾಗಿತ್ತು, ಹಾಗಾಗಿ ಜಿಲ್ಲೆಯ 10 ತಾಲೂಕುಗಳಲ್ಲಿ ಆರೋಗ್ಯ ಮೇಳಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದರು.

ಬೇರೆ ಬೇರೆ ತಾಲೂಕುಗಳಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನತೆ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಇಲ್ಲಿ ಚಿಕಿತ್ಸೆಯ ಜೊತೆಗೆ ಉಚಿತ ಔಷಧಿಗಳನ್ನು ಕೂಡ ನೀಡಲಾಗುತ್ತಿದೆ. ಶಾಸಕ ಅಭಯ ಪಾಟೀಲ ಅವರು ಸುಮಾರು 5 ಲಕ್ಷ ರೂಪಾಯಿಗಳ ಔಷಧಿ ಹಂಚಿಕೆಗಾಗಿ ನೀಡಿದ್ದಾರೆ ಆದಕಾರಣ ಸಾರ್ವಜನಿಕರು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಬೆಳಗಾವಿಯ ಎಸಿ ಕರಲಿಂಗನವರ್, ಡಾ. ತುಕ್ಕರ್, ಡಾ. ಮಾಸ್ತಿಹೊಳಿ, ಡಾ.ಸಂಜಯ್ ಡುಮ್ಮಗೊಳಗೋಳ್, ಡಾ. ಪಲ್ಲೇದ್ ಉಪಸ್ಥಿತರಿದ್ದರು.

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *