ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ.
ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ ಆಕಾಂಕ್ಷಿಗಳು ನಾನೂ ಆಕಾಂಕ್ಷಿ ನನಗೆ ಟಿಕೆಟ್ ಕೊಡಿ ಎಂದು ಕಲರ್ ಫುಲ್ ಮನವಿಗಳನ್ನು ರೆಡಿ ಮಾಡಿಕೊಂಡಿದ್ದು ಬಹುತೇಕ ಎಲ್ಲಾ ಆಕಾಂಕ್ಷಿಗಳು ಇಂದು ರಾಜ್ಯಾದ್ಯಕ್ಷ ನಳೀನಕುಮಾರ್ ಕಟೀಲು ಅವರಿಗೆ ಮನವಿ ಅರ್ಪಿಸಲಿದ್ದಾರೆ ಎಂದು ತಿಳಿದು ಬಂದಿದೆ.
ದಿನ ಕಳೆದಂತೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಬೆಳೆಯುತ್ತಲೇ ಇದೆ ಆದ್ರೆ ಯಾರು ಜ್ಯಾಕ್ ಪಾಟ್ ಹೊಡೀತಾರೆ ಅನ್ನೋದನ್ನು ಕಾದು ನೋಡಬೇಕಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ