Breaking News

ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ವಾರ್ನಿಂಗ್..

ಗೋಕಾಕ- ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನದಿಯ ದಡದಲ್ಲಿರುವ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಒಟ್ಟು 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯದಲ್ಲಿ ಈಗಾಗಲೇ 44 ಟಿಎಂಸಿ ನೀರು ಸಂಗ್ರಹವಾಗಿದ್ದು, ಘಟಪ್ರಭಾ ನದಿಗೆ ಹಿರಣ್ಯಕೇಶಿ ನದಿಯಿಂದ 15370 ಕ್ಯೂಸೆಕ್ಸ್, ಮಾರ್ಕಂಡೇಯ ನದಿಯಿಂದ 4818 ಕ್ಯೂಸೆಕ್ಸ್, ಬಳ್ಳಾರಿ ನಾಲಾದಿಂದ 2207 ಕ್ಯೂಸೆಕ್ಸ್ ಸೇರಿ ಈಗ 22395 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಯಾವುದೇ
ಸಂದರ್ಭದಲ್ಲಿಯೂ ನೀರಿನ ಪ್ರಮಾಣವು ಹೆಚ್ಚಳವಾಗುವ ಸಾಧ್ಯತೆ ಇದೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ 31153 ಕ್ಯೂಸೆಕ್ಸ್ ನೀರು ಒಳ ಹರಿಯುತ್ತಿದ್ದು, ಇದರಲ್ಲಿ ಬುಧವಾರ ಸಂಜೆಯಿಂದ ನಾಳೆ ಗುರುವಾರ ಮುಂಜಾನೆಯವರಿಗೆ 10 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿದು ಬಿಡಲಾಗುತ್ತಿದೆ. ಆದ್ದರಿಂದ ನದಿ ತೀರದ ಸಾರ್ವಜನಿಕರು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ನದಿ ದಡದ ಜನರಲ್ಲಿ ಕೋರಿಕೊಂಡಿದ್ದಾರೆ.

ಧಾರಾಕಾರ ಮಳೆಯಿಂದಾಗಿ ನಮ್ಮ ಕ್ಷೇತ್ರದ ಚಿಗಡೊಳ್ಳಿ, ಉದಗಟ್ಟಿ, ಸುಣಧೋಳಿ, ಹುಣಶ್ಯಾಳ ಪಿವೈ, ಢವಳೇಶ್ವರ, ಅವರಾದಿ, ಸೇತುವೆಗಳು ಜಲಾವೃತಗೊಂಡಿವೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಲೋಳಸೂರ ಸೇತುವೆ ಮೇಲೆಯೂ ಪರಿಣಾಮ ಬೀರಬಹುದು.
ನದಿ ತೀರದ ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ತಳಕಟ್ನಾಳ, ತಿಗಡಿ, ಸುಣಧೋಳಿ, ಬೈರನಟ್ಟಿ, ಹುಣಶ್ಯಾಳ ಪಿವೈ, ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ, ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ, ಹುಣಶ್ಯಾಳ ಪಿಜಿ, ಫುಲಗಡ್ಡಿ, ಮುಸಗುಪ್ಪಿ, ಪಟಗುಂದಿ, ಕಮಲದಿನ್ನಿ, ಮುನ್ಯಾಳ ನದಿ ತೀರದ
ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು.

ಪ್ರವಾಹ ಭೀತಿ ಎದುರಾಗಬಹುದಾದ ಸನ್ನಿವೇಶಗಳನ್ನು ಎದುರಿಸಲು ಸೂಕ್ತ ರೀತಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಮೂಡಲಗಿ ಮತ್ತು ಗೋಕಾಕ ತಾಲೂಕಾಡಳಿತಕ್ಕೆ ಸೂಚನೆಯನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ

Check Also

ಮದ್ಯರಾತ್ರಿ ಸಾರಾಯಿ ಹುಡುಕಾಡದಿದ್ದರೆ ಅವರು ಸಿಗುತ್ತಿರಲಿಲ್ಲ……!!

ವೈನ್ ಇಸ್ ಇನ್…ಮೈಂಡ್ ಇಸ್ ಔಟ್ ಆತ ಹೇಳ್ತಾರೆ ಅದು ಸತ್ಯ…. ಆತ ಕಂಠಪೂರ್ತಿ ಕುಡುದಿದ್ದ ಬೆಳಗಾವಿಗೆ ಬರಲು ಬಸ್ …

Leave a Reply

Your email address will not be published. Required fields are marked *