Breaking News

ವಿಷಾಧಿಸಿ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ….

ಬೆಳಗಾವಿ: ಹಿಂದೂ ಶಬ್ದದ ಬಗ್ಗೆ ವಿವಾದಿತ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೆ ಪಡೆದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ‘ನಿಪ್ಪಾಣಿ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕೀಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ. ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.

*ತನಿಖಾ ಸಮಿತಿ ರಚಿಸಲು ಸಿಎಂ ಬಸವರಾಜ ಬೊಮ್ಮಾಯಿಗೆ ಸತೀಶ್ ಜಾರಕಿಹೊಳಿ ಮನವಿ*

ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ‘ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಕೆಳಕಂಡ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ. ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತಾ ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವುದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿರುತ್ತೇನೆ. ಇದನ್ನು ನಾನು ವೀಕಿಪಿಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧಾರಿತವಾಗಿರುತ್ತದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆ. ಮತ್ತೊಮ್ಮೆ ತಮ್ಮಲ್ಲಿ ಕೇಳಿಕೊಳ್ಳುವದೇನೆಂದರೆ, ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ, ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ಈಗ ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ.ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ’ ಎಂದು ಪತ್ರ ಬರೆದಿದ್ದಾರೆ.

Check Also

ಇವರು ನೀಡಿದ ಚಿಕಿತ್ಸೆ ಅದ್ಭುತ , ಬೆಳಗಾವಿಯ ವ್ಯಕ್ತಿ ಇವರ ಔಷಧಿಯಿಂದ ಬದುಕಿದ್ದು ಪವಾಡ…!!

ನಾಟಿ ವೈದ್ಯ ಲೋಕೇಶ್ ಟೇಕಲ್ ಅವರು ನೀಡಿದ ಚಿಕಿತ್ಸೆ ನೋಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ …

Leave a Reply

Your email address will not be published. Required fields are marked *