ಬೆಳಗಾವಿ : ಜಿಲ್ಲೆಯ ಅಂಕಲಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಬರುವ ಅಕ್ಕತಂಗೆರಹಾಳದಲ್ಲಿ ಜೋಡಿ ಕೊಲೆ ನಡೆದಿರುವ ಘಟನೆ ಮಂಗಳವಾರ ಜನ ವರದಿಯಾಗಿದೆ.
ಅಕ್ಕತಂಗೇರಹಾಳ ಗ್ರಾಮದ ಮಲ್ಲಿಕಾರ್ಜುನ ಜಗದಾರ(40) ಹಾಗೂ ರೇಣುಕಾ ಮಾಳಗಿ (42) ಹತ್ಯೆಗೀಡಾದ ದುದೈವಿಗಳಾಗಿದ್ದಾರೆ. ಈ ಕೊಲೆಯ ಆರೋಪಿತನಾದ ಯಲ್ಲಪ್ಪ ಮಾಳಗಿ(45) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅಂಕಲಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹಾಗೂ ಅಂಕಲಿ ಪೊಲೀಸ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಅನೈತಿಕ ಸಂಬಂಧವೇ ಕಾರಣ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ