Breaking News

ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ- ರಾಜ್ಯದ ಪುಣ್ಯ ಸ್ಥಳ, ಧರ್ಮಸ್ಥಳ ಈಗ ರಾಷ್ಟ್ರದ ಗಮನ ಸೆಳೆದಿದೆ.ವೀರೇಂದ್ರ ಹೆಗ್ಗಡೆ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದು ಪ್ರಧಾನಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಪಿ.ಟಿ.ಉಷಾ, ವಿ.ವಿಜಯೇಂದ್ರ ಪ್ರಸಾದ್ ಮತ್ತು ಇಳೆಯರಾಜಾ ನಾಮನಿರ್ದೇಶನಗೊಂಡಿದ್ದಾರೆ.

ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಪಿ.ಟಿ.ಉಷಾ, ವಿ.ವಿಜಯೇಂದ್ರ ಪ್ರಸಾದ್ ಮತ್ತು ಇಳೆಯರಾಜಾ ನಾಮನಿರ್ದೇಶನಗೊಂಡಿದ್ದಾರೆ. ಸಂಸತ್ ಮೇಲ್ಮನೆಗೆ ನಾಮನಿರ್ದೇಶನಗೊಂಡಿರುವ ನಾಲ್ವರೂ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥಿಸಲು, ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶ ಸಿಕ್ಕಿತು. ಅವರು ಖಂಡಿತವಾಗಿಯೂ ಸಂಸದೀಯ ಕಲಾಪಗಳನ್ನು ಉತ್ಕೃಷ್ಟಗೊಳಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *