ಬೆಳಗಾವಿ
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗಿದೆ. ಇದಕ್ಕೆ ಇನ್ನು ವ್ಯಾಕ್ಸಿನ್ ಸಿಕ್ಕಿಲ್ಲ. ಜನರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ವಿ.ಮುನ್ಯಾಳ ಹೇಳಿದರು.
ಶುಕ್ರವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿದೆ. ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಆದರೂ ಜನರು ಜಾಗೃತೆಯಿಂದ ಇರಬೇಕು. ಇದಕ್ಕೆ ಇನ್ನೂ ವ್ಯಾಕ್ಸಿ ಕಂಡು ಹಿಡಿದಿಲ್ಲ.
ಸದ್ಯ ಬೆಳಗಾವಿಯಲ್ಲಿ ಸಾಲು ಸಾಲು ಹಬ್ಬ ಇರುವುದರಿಂದ ಜನರು ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ ಧರಿಸಿಕೊಂಡು ಓಡಾಡಬೇಕು. ಸ್ವಲ್ಪ ಎಚ್ಚರ ತಪ್ಪಿದ್ದರೂ ಅಪಾಯ ಗ್ಯಾರಂಟಿ. ಜನರು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಡಾ. ಮುನ್ಯಾಳ ಜನರಲ್ಲಿ ವಿನಂತಿಸಿಕೊಂಡರು.