Breaking News
Home / Breaking News / ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಿದ ಪ್ರಧಾನಿ

ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಿದ ಪ್ರಧಾನಿ

 

ನವದೆಹಲಿ: ಕಳೆದ ವಾರವಷ್ಟೇ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ‘ಭಾರತ ರತ್ನ’ ಘೋಷಿಸಿದ್ದ ಕೇಂದ್ರ ಸರ್ಕಾರ ಶುಕ್ರವಾರ ಮೂವರಿಗೆ ಭಾರತ ರತ್ನ ಪ್ರದಾನ ಮಾಡುವುದಾಗಿ ಘೋಷಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನ ಮಂತ್ರಿಗಳಾದ ಪಿ ವಿ ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಹಾಗೂ ದೇಶದ ಹಸಿರು ಕ್ರಾಂತಿಯ ಹರಿಕಾರ ಡಾ ಎಂ ಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಗೌರವ ನೀಡುವುದಾಗಿ ಘೋಷಿಸಿದ್ದಾರೆ.

ನರಸಿಂಹ ರಾವ್ ಅವರು ಭಾರತವನ್ನು ನಿರ್ಣಾಯಕ ಪರಿವರ್ತನೆಗಳ ಮೂಲಕ ಮುನ್ನಡೆಸಿ ದೇಶದ ಸಾಂಸ್ಕೃತಿಕ ಮತ್ತು ಬೌದ್ಧಿಕ ಪರಂಪರೆಯನ್ನು ಶ್ರೀಮಂತಗೊಳಿಸಿದರು, ಚರಣ್ ಸಿಂಗ್ ಅವರು ದೇಶಕ್ಕೆ ಅನುಪಮ ಕೊಡುಗೆ ನೀಡಿದ್ದಾರೆ. ನರಸಿಂಹ ರಾವ್ ಅವರ ದೂರದೃಷ್ಟಿಯ ನಾಯಕತ್ವವು ಭಾರತವನ್ನು ಆರ್ಥಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು, ಅದರ ಸಮೃದ್ಧಿ, ಬೆಳವಣಿಗೆಗೆ ಭದ್ರ ಬುನಾದಿ ಹಾಕಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿರುವುದು ನಮ್ಮ ಸರ್ಕಾರದ ಸೌಭಾಗ್ಯ. ದೇಶಕ್ಕೆ ಅವರು ನೀಡಿದ ಅನುಪಮ ಕೊಡುಗೆಗೆ ಈ ಗೌರವ ಸಮರ್ಪಿಸಲಾಗಿದೆ. ಅವರು ತಮ್ಮ ಇಡೀ ಜೀವನವನ್ನು ರೈತರ ಹಕ್ಕುಗಳು ಮತ್ತು ಅವರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ, ದೇಶದ ಗೃಹ ಮಂತ್ರಿಯಾಗಿ ಅವರು ಯಾವಾಗಲೂ ರಾಷ್ಟ್ರ ನಿರ್ಮಾಣಕ್ಕೆ ಉತ್ತೇಜನ ನೀಡಿದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಅವರು ದೃಢವಾಗಿ ನಿಂತಿದ್ದರು. ನಮ್ಮ ರೈತ ಸಹೋದರ ಸಹೋದರಿಯರಿಗೆ ಅವರ ಸಮರ್ಪಣೆ ಮತ್ತು ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅವರ ಬದ್ಧತೆ ಇಡೀ ರಾಷ್ಟ್ರಕ್ಕೆ ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.

ಭಾರತ ಸರ್ಕಾರವು ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣದಲ್ಲಿ ನಮ್ಮ ದೇಶಕ್ಕೆ ನೀಡಿದ ಸ್ಮಾರಕ ಕೊಡುಗೆಗಳನ್ನು ಗುರುತಿಸಿ ಭಾರತ ರತ್ನ ನೀಡುತ್ತಿರುವುದು ಅಪಾರ ಸಂತೋಷದ ವಿಷಯವಾಗಿದೆ. ಸವಾಲಿನ ಸಮಯದಲ್ಲಿ ಭಾರತವು ಕೃಷಿಯಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದರು. ಭಾರತೀಯ ಕೃಷಿಯನ್ನು ಆಧುನೀಕರಿಸುವಲ್ಲಿ ಮಹೋನ್ನತ ಪ್ರಯತ್ನಗಳನ್ನು ಮಾಡಿದರು. ನಾವೀನ್ಯತೆ ಮತ್ತು ಮಾರ್ಗದರ್ಶಕರಾಗಿ ಅವರ ಅಮೂಲ್ಯವಾದ ಕೆಲಸವನ್ನು ನಾವು ಗುರುತಿಸುತ್ತೇವೆ. ವಿದ್ಯಾರ್ಥಿಗಳಲ್ಲಿ ಕಲಿಕೆ ಮತ್ತು ಸಂಶೋಧನೆಯನ್ನು ಪ್ರೋತ್ಸಾಹಿಸುತ್ತೇವೆ. ಡಾ. ಸ್ವಾಮಿನಾಥನ್ ಅವರ ದಾರ್ಶನಿಕ ನಾಯಕತ್ವವು ಭಾರತೀಯ ಕೃಷಿಯನ್ನು ಪರಿವರ್ತಿಸಿದ್ದು ಮಾತ್ರವಲ್ಲದೆ ರಾಷ್ಟ್ರದ ಆಹಾರ ಭದ್ರತೆ ಮತ್ತು ಸಮೃದ್ಧಿಯನ್ನು ಖಾತ್ರಿಪಡಿಸಿದೆ ಎಂದು ಹೊಗಳಿದ್ದಾರೆ.

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *