ಖಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ನಿನ್ನೆ ರಾತ್ರಿ ವೈದ್ಯರು,ಮತ್ತು ನರ್ಸಿಂಗ್ ಸ್ಟಾಫ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಆಸ್ಪತ್ರೆಯ ,ವೈದ್ಯರು,ನರ್ಸಗಳು,ವಾರ್ಡ ಬಾಯ್ ಗಳು ಸೇರಿದಂತೆ ಆಸ್ಪತ್ರೆಯ ಎಲ್ಲ ವೈದ್ಯಕೀಯ ಸಿಬ್ಬಂಧಿಗಳು ಭೀಮ್ಸ್ ಮೆಡಿಕಲ್ ಕಾಲೇಜು ಎದುರು ಪ್ರತಿಭಟನೆ ಆರಂಭಿಸಿದ್ದಾರೆ.
ನಾವೂ ಸಹ ನಮ್ಮ ಕುಟುಂಬವನ್ನು ಬಿಟ್ಟು ಹಗಲು ರಾತ್ರಿ ಸೊಂಕಿತರಿಗೆ ಚಿಕಿತ್ಸೆ ಕೊಡುತ್ತಿದ್ದೇವೆ.ಜೀವದ ಹಂಗು ತೊರೆದು ಸೇವೆ ಮಾಡುವ ಸಂಧರ್ಭದಲ್ಲಿ ನಮ್ಮ ಮೇಲೆಯೇ ಹಲ್ಲೆ ನಡೆಯುತ್ತಿದೆ. ಇಂತಹ ವಾತಾವರಣದಲ್ಲಿ ನಾವು ಚಿಕಿತ್ಸೆ ನೀಡುವದಾದರೂ ಹೇಗೆ ? ನಮಗೆ ರಕ್ಷಣೆ ಕೊಡಿ ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ವೈದ್ಯಕೀಯ ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡಿದ ಕಿಡಗೇಡಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕು,ಜೊತೆಗೆ ವೈದ್ಯಕೀಯ ಸಿಬ್ಬಂಧಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಲಾಗಿದ್ದು,ಪ್ರತಿಭಟನಾ ನಿರತ ವೈದ್ಯಕೀಯ ಸಿಬ್ಬಂಧಿಗಳನ್ನು ಮನವೊಲಿಸಲು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಸಾದ್ಯತೆ ಇದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ