Breaking News

ಅನೈತಿಕ ಮೈತ್ರಿಗೆ ಉಳಿಗಾಲವಿಲ್ಲ- ಅಭಯ ಪಾಟೀಲ

ಬೆಳಗಾವಿ
ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿಕೊಂಡು ಮೈತ್ರಿ ಸರಕಾರ ನಡೆಸಲು ಸಕಲ ಸಿದ್ಧತೆ ನಡೆಸಿದ್ದರೇ, ಇತ್ತ ಬೆಳಗಾವಿಯಲ್ಲಿ ಬಿಜೆಪಿ ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ಕಾರ್ಯಕರ್ತರು ಕಪ್ಪು ಬಟ್ಟೆ ಕಟ್ಟಿಕೊಂಡ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಶಾಸಕ ಅಭಯ ಪಾಟೀಲ ಮಾತನಾಡಿ, ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗೋಲ್ಲ ಎಂದು ಬಾಯಿ ಬಡೆದುಕೊಳ್ಳುತ್ತಿದ್ದರು. ಈಗ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರಕಾರ ನಡೆಸುತ್ತಿರುವುದು ಬಹಳ ದಿನ ನಡೆಯುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಜೆಡಿಎಸ್- ಕಾಂಗ್ರೆಸ್ ನಡೆಸುತ್ತಿರುವ ಮೈತ್ರಿ ಅನೈತಿಕವಾಗಿದೆ. ಪ್ರಜಾಪ್ರಭುತ್ವ ವಿರೋಧಿದ ನಡುವೆಯೂ ಸರಕಾರ ನಡೆಸುತ್ತಿರುವುದು ನಾಚಿಗೇಡು ಸಂಗತಿ. ಕಾಂಗ್ರೆಸ್ ನ ಸಿದ್ದರಾಮಯ್ಯ ಸುಳ್ಳಗಾರ. ಕುಮಾರಸ್ವಾಮಿ ಮೋಸಗಾರ. ಈ ಸರಕಾರ ಆರು ತಿಂಗಳಲ್ಲಿಯೇ ಬಿಳುತ್ತದೆ. ಮತ್ತೇ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.
ಬಿಜೆಪಿ ಮುಖಂಡರಾದ ರಾಜೇಂದ್ರ ಹರಕುಣಿ, ಲೀನಾ ಟೋಪಣ್ಣವರ, ರಾಜು ಚಿಕ್ಕನಗೌಡರ, ಮಹಾಂತೇಶ ಒಕ್ಕೂಂದ, ಮುರುಗೇಶ ಸೇರಿದಂತೆ ಮೊದಲಾದವರು ಹಾಜರಿದ್ದರು.

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *