ಬೆಳಗಾವಿ-ಬೆಳಗಾವಿಯಲ್ಲಿ ಮೂರನೇಯ ಬಾರಿಗೆ ನಡೆಯುತ್ತಿರುವ ರಾಜ್ಯಮಟ್ಟದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವೀರ ರಾಣಿ ಚನ್ನಮ್ಮಾಜಿಯ ಪ್ರತಿಮೆಗೆ ಮಾಲಾರ್ಪನೆ ಮಾಡಿ ಕಾರ್ಯಕಾರಿಣಿಗೆ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿಶ್ವನಾಥ ಪಾಟೀಲ ತಿಳಿಸಿದ್ದಾರೆ
ಅಕ್ಟೋಬರ ಮೂರು ಹಾಗು ನಾಲ್ಕರಂದು ಎರಡು ದಿನಗಳ ಕಾಲ ಬೆಳಗಾವಿಯ ಧರ್ಮನಾಥ ಭವನದಲ್ಲಿ ಕಾರ್ಯಕಾರಿಣಿ ನಡೆಯಲಿದ್ದು ಈ ಕುರಿತು ಮಾದ್ಯಮ ಕೇಂದ್ರ ಊದ್ಘಾಟಿಸಿ ಮಾತನಾಡಿದ ಅವರು ಬೆಳಗಾವಿಯಲ್ಲಿ ಕಾರ್ಯಕಾರಿಣಿಗೆ ಎಲ್ಲ ರೀತಿಯ ಸಿದ್ಧತೆಗಳನ್ನುಮಾಡಿಕೊಳ್ಳಲಾಗಿದೆ ಎಂದರು
ಬಿಜೆಪಿ ಜಿಲ್ಲಾ ಉಸ್ತುವಾರಿ ಜಗದೀಶ ಹಿರೇಮನಿ ಮಾತನಾಡಿ ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕಾರಿಣಿಯಲ್ಲಿ ಕಾವೇರಿ ಹಾಗು ಮಹದಾಯಿ ಸೇರಿದಂತೆ ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಯಲಿದೆ ರಾಜ್ಯ ಹಾಗು ರಾಷ್ಟ್ರದನಾಯಕರು ಪಕ್ಷದ ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದರು
ಸಂಜಯ ಪಾಟೀಲ ಅಭಯ ಪಾಟೀಲ ಅನೀಲ ಬೆನಕೆ ಕಿರಣ ಜಾಧವ ರಾಜೀವ ಟೋಪಣ್ಣವರ ಮೊದಲಾದವರು ಉಪಸ್ಥಿತರಿದ್ದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ