ಬೆಳಗಾವಿ-ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಎಬಿವಿಪಿ ಕಾರ್ಯಕರ್ತ ಮೇಲೆ ಲಾಠಿ ಪ್ರಹಾರ ನಡೆಸಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬೆಳಗಾವಿ ಬಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿ ಹೊರಡಿಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ ವಿರುದ್ಧ ದಿಕ್ಕಾರದ ಘೋಷನೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಮಾವೇಶಗೊಂಡ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ದೇಶ ವಿರೋಧಿ ಚಟುವಟಿಕೆ ನಡೆಸಿದ ಆರೋಪಿಗಳ ಬಂಧನಕ್ಕೆ ವಿಳಂಬ ನೀತಿ ಅನುಸರಿಸುತ್ತಿದೆ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟಿಸಿದ ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು
ದೇಶದ್ರೋದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು, ದೇಶ ವಿರೋದಿ ಚಟುವಟಿಕೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು,ಎಬಿವಿಪಿ ಕಾರ್ಯಕರ್ತರಮೇಲೆ ಲಾಠಿ ಪ್ರಹಾರ ನಡೆಸಿದ ಪೋಲಿಸರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯಿಸಿತು
ಶಾಸಕ ಸಂಜಯ ಪಾಟೀಲ,ಮಾಜಿ ಶಾಸಕ ಅಭಯ ಪಾಟೀಲ ಅನೀಲ ಬೆನಕೆ, ಕಿರಣ ಜಾಧವ ದೀಪಕ ಜಮಖಂಡಿ ರಾಜೀವ ಟೋಪಣ್ಣವರ,ಜಯಶ್ರೀ ಪಾಟೀಲ ಶಶಿಕಾಂತ ಪಾಟೀಲ,ರಾಜು ಜಿಕ್ಕನಗೌಡರ,ಮಲ್ಲಿಕಾರ್ಜುನ ಸತ್ತಿಗೇರಿ ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
Check Also
ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …