ಬೆಂಗಳೂರು- ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ.
ಪಾದಯಾತ್ರೆಯ ಮುನ್ನಾ ದಿನ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಕುಮಾರ ಬಂಗಾರಪ್ಪನವರ ನಿವಾಸದಲ್ಲಿ ಬಿಜೆಪಿಯ ಬಸನಗೌಡ ಯತ್ನಾಳ, ರಮೇಶ್ ಜಾರಕಿಹೊಳಿ,ಪ್ರತಾಪಸಿಂಹ ಮತ್ತು ಕುಮಾರ ಬಂಗಾರಪ್ಪನವರು ರಹಸ್ಯ ಸಭೆ ನಡೆಸಿದ್ದು ಈ ಭೇಟಿಯ ರಹಸ್ಯ ಏನು ? ಎನ್ನುವದು ಈಗ ತೀವ್ತ ಕುತೂಹಲ ಕೆರಳಿಸಿದೆ.
ಸಭೆಯ ಬಳಿಕ ಮಾತನಾಡಿದ ಕುಮಾರ್ ಬಂಗಾರಪ್ಪ ಬಿಜೆಪಿ ಪಕ್ಷದಲ್ಲಿ ಬಿಜೆಪಿ ಹೈಕಮಾಂಡ್ ನಿರ್ಧಾರವೇ ಅಂತಿಮ ನಾವೆಲ್ಲ ಕೇಂದ್ರದ ಬಿಜೆಪಿ ನಾಯಕರ ಆದೇಶ ಪಾಲನೆ ಮಾಡುತ್ತೇವೆ ಎಂದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ