Breaking News

ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಬರ್ತಾರೆ.

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಆತ್ಮಾವಲೋಕನ ಪರ್ವ ಶುರುವಾಗಿದೆ. ಇಂದು ಸೋಮವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಳಗಾವಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಇಂದು ಸಾಯಂಕಾಲ 4 ಗಂಟೆಗೆ ಬೆಳಗಾವಿಯ ಡಾ. ಗುರುದೇವ ರಾನಡೆ ಮಂದಿರ ಎಸಿಪಿಆರ್ ನ ನವೀಕೃತ ಕಟ್ಟಡದ ಲೋಕಾರ್ಪಣೆ ಮತ್ತು ಪಾತವೇಟು ಗಾಡ್ ನಿಯತಕಾಲಿಕೆಯ 200ನೇ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ‌ ಬೊಮ್ಮಾಯಿ ಅವರು ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ ಯುಕೆ-27 ಹೋಟೆಲ್ ನಲ್ಲಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ ಸೋತ ಅಭ್ಯರ್ಥಿಗಳ ಜೊತೆಗೆ ಬೊಮ್ಮಾಯಿ, ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಸೋತ ಅಭ್ಯರ್ಥಿಗಳು ತಮ್ಮ ಸೋಲಿಗೆ ಕೆಲ ಸ್ವಪಕ್ಷಿಯರೇ ಕಾರಣ ಎಂಬ ದೂರನ್ನು ಬಸವರಾಜ ಬೊಮ್ಮಾಯಿ ಅವರ ಮುಂದಿಡಲಿದ್ದು, ಆರೋಪ-ಪ್ರತ್ಯಾರೋಪ ಜೋರಾಗಿ ಕೇಳ ಬರುವ ಸಾಧ್ಯತೆಯಿದೆ. ಇನ್ನು ಯಾರು..? ಯಾರ ಮೇಲೆ ಆರೋಪ ಮಾಡುತ್ತಾರೆ ಎಂಬುದು ಸಧ್ಯ ತೀವ್ರ ಕುತೂಹಲ‌ ಮೂಡಿಸಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *