ದೂಧಸಾಗರ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ : ರೈಲು ಸಂಚಾರದಲ್ಲಿ ವ್ಯತ್ಯಯ
ಬೆಳಗಾವಿ : ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಯಲ್ಲಿರುವ ದೂದಸಾಗರ ಫಾಲ್ಸ್ ಬಳಿ ಇರುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ರಾಜ್ಯದ ಗಡಿ ಭಾಗವಾದ ಖಾನಾಪುರ ತಾಲೂಕಿನಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಡಿಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯ ರಬ್ಬಸಕ್ಕೆ ದೂಧ್ ಸಾಗರ ಜಲಪಾತದ ಬಳಿ ತೀವ್ರತರಹದ ಗುಡ್ಡ ಕುಸಿತವಾಗಿದೆ.
ಇದರಿಂದ ಕರ್ನಾಟಕ ಮತ್ತು ಗೋವಾ ನಡುವಿನ ರೈಲು ಸಂಚಾರ ವ್ಯತ್ಯಯಗೊಂಡಿದೆ. ನಿನ್ನೆ ಮಂಗಳವಾರ ರಾತ್ರಿಯಷ್ಟೇ ಹವಾಮಾನ ಇಲಾಖೆಯ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅವರು ಪ್ರವಾಹ, ಅತಿವೃಷ್ಠಿಯ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುವದನ್ನು ಇಲ್ಲಿ ಗಮನಿಸಬಹುದಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ