ಬೆಳಗಾವಿ-ಬೆಳಗಾವಿಯಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಪ್ರಕರಣಕ್ಕೆ ಸಮಂಧಿಸಿದಂತೆ ಕಟ್ಟಡ ಕಾರ್ಮಿಕನಿಗೆ ಸಣ್ಣ ಪುಟ್ಟ ಗಾಯ ಆಗಿದ್ದು,ಆದ್ರೆಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಖನಗಾವಿ ಕೆ.ಹೆಚ್. ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು.ಇಂದು ಮಧ್ಯಾಹ್ನ ಜಾಧವ್ ನಗರದಲ್ಲಿ ಕಾರ್ಮಿಕನ ಮೇಲೆ ದಾಳಿ ಮಾಡಿದ್ದ ಚಿರತೆ ಕಾಣೆಯಾಗಿದೆ.ಒಂದು ಕಡೆ ಚಿರತೆಯ ಪತ್ತೆ ಮಾಡಲು ಶೋಧ ಕಾರ್ಯಾಚರಣೆ ನಡೆಯುತ್ತಿದ್ದು,ಚಿರತೆ ದಾಳಿಯಿಂದ ಸಿದರಾಯಿ ಮಿರಜಕರ್‌ಗೆ ಸಣ್ಣಪುಟ್ಟ ಗಾಯ ಆಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗುತ್ತಿದ್ದ ಮಗ ಸಿದರಾಯಿಗೆ, ಮಗ ಸಿದರಾಯಿ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿ ಶಾಂತಾಗೆ ಹೃದಯಾಘಾತ ಆಗಿದೆ ಎನ್ನುವ ಸುದ್ಧಿ ತಿಳಿದಿದೆ.ಹೃದಯಾಘಾತದಿಂದ ಶಾಂತಾ ಮಿರಜಕರ್(65) ಮೃತಪಡ್ಟಿದ್ದಾಳೆ.
ಮಗ ಮನೆ ತಲುಪುವ ಮೊದಲೇ ತಾಯಿ ಇಹಲೋಕ ತ್ಯೇಜಿಸಿದ್ದುಖನಗಾವಿ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ