Breaking News

ಇಂದು ಬೆಳಗಾವಿಯಲ್ಲಿ ಬಿಜೆಪಿ ಹವಾ….!!

ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ,ಮಂಗಲಾ ಸುರೇಶ್ ಅಂಗಡಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯದ ಕಮಲ ಪಡೆ ಬೆಳಗಾವಿಗೆ ಆಗಮಿಸಲಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದು ಇವತ್ತು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸ್ಥಳೀಯ ಬಿಜೆಪಿ ನಾಯಕರ ಜೊತೆ ಸರಣಿ ಸಭೆಗಳನ್ನು ನಡೆಸಿ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಡಿಸಿಎಂ ಗೋವೀಂದ ಕಾರಜೋಳ,ಸಚಿವ ಈಶ್ವರಪ್ಪ ಸೇರಿದಂತೆ ರಾಜ್ಯದ ಹಿರಿಯ ಬಿಜೆಪಿ ನಾಯಕರು ಬೆಳಗಾವಿಗೆ ಆಗಮಿಸಲಿದ್ದಾರೆ.

ಮಾಜಿ ಕೇಂದ್ರ ಸಚಿವ, ದಿ.ಸುರೇಶ್ ಅಂಗಡಿ ಅವರ ಪತ್ನಿ  ಮಂಗಲಾ ಅಂಗಡಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದು ಈಗಾಗಲೇ ಅವರು ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದು ಇವತ್ತು ನಾಮಪತ್ರ ಸಲ್ಲಿಸಲಿದ್ದಾರೆ.

ಸೋಮವಾರ  ಬೆಳಗಾವಿಗೆ ಕಾಂಗ್ರೆಸ್  ನಾಯಕರ ದಂಡೇ ಆಗಮಿಸಿತ್ತು,ಇವತ್ತು ಮಂಗಳವಾರ ಬೆಳಗಾವಿಯಲ್ಲಿ ಬಿಜೆಪಿ ಪಕ್ಷದ್ದೇ ಹವಾ ಜೋರು…

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *