Breaking News

ಸಿದ್ಧು ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ..??

ಬೆಳಗಾವಿ- ಹೊಸ ಸರ್ಕಾರದ ಹೊಸ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಯ ಪಾಲಿಗೆ ಭರವಸೆಯ ಬೆಳಕು ಮೂಡಿದ್ದು ಹಲವಾರು ಮಹತ್ವದ ಯೋಜನೆಗಳು ಬಜೆಟ್ ನಲ್ಲಿ ಘೋಷಣೆಯಾಗಿವೆ.

ಬೆಳಗಾವಿಯಲ್ಲಿ ಅಲ್ಪಸಂಖ್ಯಾತ ಯುವಕರಿಗೆ ಕೌಶಲ್ಯ ತರಬೇತಿ ಕೇಂದ್ರ…

• 4 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ ಸೇರಿದಂತೆ ರಾಮನಗರ, ದಾವಣಗೆರೆ ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವ ಜನರಿಗೆ ಕೌಶಲ್ಯ ತರಬೇತಿಯನ್ನು ಪ್ರಾರಂಭ.

ಬೆಳಗಾವಿಯಲ್ಲಿ AHS ಘಟಕ ಸ್ಥಾಪನೆ…

• ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (Allied Health Sciences) ಕಾಲೇಜುಗಳ ಸ್ಥಾಪನೆ.

ಬೆಳಗಾವಿಯ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆಯ ಉಪಕರಣಗಳ ಖರೀಧಿಗೆ ಅನುದಾನ….

• ಬೆಳಗಾವಿ ಸೇರಿದಂತೆ ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕಾರ್ಯಾರಂಭಿಸಲು ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ. ನೆರವು.

ಮಹಾದಾಯಿಯ ಜಪ..

• ಮಹದಾಯಿ ನ್ಯಾಯಾಧಿಕರಣದಿಂದ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಹಂಚಿಕೆಯಾದ 3.90 ಟಿ.ಎಂ.ಸಿ. ನೀರಿನ ಬಳಕೆಗಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದ್ದು, ಅವಶ್ಯಕವಿರುವ ಅರಣ್ಯ ತೀರುವಳಿ ಪಡೆದು, ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಯತ್ನಿಸಲಾಗುವುದು.

ಬೆಳಗಾವಿ ಜಿಲ್ಲೆಯ ಕೆರೆ ತುಂಬಿಸಲು ಅನುದಾನ…

• ರಾಜ್ಯದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಇವುಗಳಲ್ಲಿ 19 ಕೆರೆ ತುಂಬಿಸುವ ಯೋಜನೆಗಳನ್ನು 770 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 899 ಕೆರೆಗಳಿಗೆ ನೀರು ತುಂಬಿಸಲಾಗುವುದು.

ಯಲ್ಲಮ್ಮನ ಗುಡ್ಡದಲ್ಲಿ ಪಕ್ಷಿದಾಮ…

• ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರವಾಗಿ ಅಭಿವೃದ್ಧಿ.

ಕಿತ್ತೂರು ಕೋಟೆಯಲ್ಲಿ ಲೈಟ್ ಆ್ಯಂಡ್ ಸೌಂಡ್ ಶೋ…

• ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಕಿತ್ತೂರು ಕೋಟೆ, ಬೀದರ್ ಕೋಟೆ, ನಂದಿಬೆಟ್ಟದ
ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆ.

ಬೆಳಗಾವಿಯ ಏತ ನೀರಾವರಿ ಯೋಜನೆಗಳಿಗೆ ಗ್ರೀನ್ ಸಿಗ್ನಲ್…

• ಪ್ರಸಕ್ತ ಸಾಲಿನಲ್ಲಿ ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ್ಟಿ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಸುಮಾರು 39,134 ಹೆಕ್ಟೇರ್‌ ಅಚ್ಚುಕಟ್ಟು ಸ್ಥಿರೀಕರಣ ಮಾಡಲಾಗುವುದು.

Check Also

ಕುಡಚಿ ರೈಲು ನಿಲ್ದಾಣದಲ್ಲಿ ʻವಂದೇ ಭಾರತ ರೈಲುʼ ನಿಲುಗಡೆಗೆ ಸಂಸದೆ ಪ್ರಿಯಾಂಕಾ ಮನವಿ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲನ್ನು (ನಂ.20669) ನಿಲುಗಡೆ ಮಾಡಬೇಕೆಂದು ಕೇಂದ್ರ …

Leave a Reply

Your email address will not be published. Required fields are marked *