Breaking News

ರಿಯಾಯಿತಿ ಬಸ್ ಪಾಸ್ ಬೇಕಾ,ಹಾಗಾದ್ರೆ ಈ ಸುದ್ದಿ ಓದಿ.

ಬೆಳಗಾವಿ- 2023-24ನೇ ಶೈಕ್ಷಣಿಕ ವರ್ಷಕ್ಕೆ ರಿಯಾಯಿತಿ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಲು ಸೇವಾಸಿಂಧು ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಿಂದ ಸೇವಾಸಿಂಧು ಪೋರ್ಟಲ್ ಮೂಲಕ ಸಂಪೂರ್ಣ ಯಾಂತ್ರೀಕೃತ ವಿದ್ಯಾರ್ಥಿ ಬಸ್ ವಿತರಣೆ ಪ್ರಕ್ರಿಯೆಯನ್ನು ಆರಂಬಿಸಲಾಗಿದೆ. ಪಾಸ್ ಗಾಗಿ ವಿದ್ಯಾರ್ಥಿಗಳು ಸೇವಾಸಿಂಧು ಫೊರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಲಿಂಕ್ URL https://devas in shudder vices.Karnataka.gov.in/bus pass services

ವಿದ್ಯಾರ್ಥಿಗಳು ತಾವೇ ಸೇವಾ ಸಿಂಧು ಪೋರ್ಟಲ್ ನಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದಾಗಿದ್ದು ಅದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ‌. ಇದಲ್ಲದೆ, ವಿದ್ಯಾರ್ಥಿಗಳು ಕರ್ನಾಟಕ-ಒನ್ ಅಥವ ಗ್ರಾಮ- ಒನ್ ಕೇಂದ್ರದ ಸಿಬ್ಬಂದಿಗಳ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದ್ದು, ಅದಕ್ಕೆ ಸದರಿ ಕೇಂದ್ರದ ಸಿಬ್ವಂದಿಗೆ ರೂ. 30 ಸೇವಾ ಶುಲ್ಕ ನೀಡಬೇಕು. ಅರ್ಜಿ ಅನುಮೋದನೆಯಾದ ನಂತರ ಪಾಸ್ ಪಡೆಯಲು ಭೇಟಿ ನೀಡಬೇಕಾದ ಕೌಂಟರ್ ಹೆಸರು,ವಿಳಾಸದ ಮಾಹಿತಿಯನ್ನು ಅರ್ಜಿಯಲ್ಲಿ ನೀಡಿದ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್. ಮೂಲಕ ಕಳುಹಿಸಲಾಗುವುದು. ಅದರಂತೆ ವಿದ್ಯಾರ್ಥಿಗಳು ಕೌಂಟರ್ ಗೆ ಹೋಗಿ ನಿಗಧಿತ ಪಾಸಿನ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆಯಬಹುದಾಗಿದೆ. ಪಾಸ್ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್,ಡೆವಿಟ್ ಕಾರ್ಡ್,ಯುಪಿಐ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ಸರ್ಕಾರದ ಶಕ್ತಿ
ಯೋಜನೆಯಲ್ಲಿ ವಿದ್ಯಾರ್ಥಿನಿಯರಿಗೆ ರಾಜ್ಯದೊಳಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಲಾಗಿರುತ್ತದೆ. ನೆರೆ ರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ,ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಜರ್ನಾಟಕ ರಾಜ್ಯದಲ್ಲಿ ವಾಸವಿದ್ದು ನೆರೆ ರಾಜ್ಯದ ಶಾಲೆ,ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗಡಿ ಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ಬಸ್ ಪಾಸ್ ಪಡೆಯುವುದು ಅವಶ್ಯವಿರುತ್ತದೆ. ಅವರೂ ಸಹ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ವ್ಯಾಪ್ತಿಯಲ್ಲಿ 55 ಬಸ್ ನಿಲ್ದಾಣಗಳು ಹಾಗೂ 14 ಕರ್ನಾಟಕ-ಒನ್ ಕೇಂದ್ರಗಳು ಸೇರಿದಂತೆ ಒಟ್ಟು 74 ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಕೌಂಟರ್ ಗಳನ್ನು ಸ್ಥಾಪಿಸಲಾಗಿದ್ದು ಅವುಗಳ ವಿವರಗಳನ್ನು ಸಂಸ್ಥೆಯ ವೆಬ್ ಸೈಟ್ https://nwkrtc.karnataka.gov.in ನಲ್ಲಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *