Breaking News

ಛೇ….ಇದು ಹೋಪ್ ಲೆಸ್… ಈಗ ಲಂಚಾವತಾರವೂ ಕ್ಯಾಶ್ ಲೆಸ್…!!!

ಬೆಳಗಾವಿ: ಈಗ ಏನಿದ್ದರೂ ಡಿಜಿಟಲ್ ಪರ್ವ ಹೀಗಾಗಿ ಈಗ ಕ್ಯಾಶ್ ಲೆಸ್ ರೋಗ  ಬ್ರಷ್ಟಾಚಾರದ ಕ್ಷೇತ್ರಕ್ಕೂ ಹರಡಿದ್ದು ,ಲಂವವನ್ನು ಪೇಟಿಯಮ್ ಮಾಡಿಸಿಕೊಂಡ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಅನ್ನೋದು ವಿಶೇಷ

ಪಿತ್ರಾರ್ಜಿತ ಆಸ್ತಿ ಪರಭಾರೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ನೀಡಲು ರೂ.4,000 ಲಂಚ ಕೇಳಿದ ಸವದತ್ತಿ ತಾಲೂಕು ಮುರಗೋಡದ ಸಬ್ ರಿಜಿಸ್ಟ್ರಾರ್ ಮತ್ತು ಸಬ್ ರಿಜಿಸ್ಟ್ರಾರ್ ಪರವಾಗಿ ಲಂಚವನ್ನು ಸ್ವೀಕರಿಸಿದ ಬಾಂಡ್ ರೈಟರ್ ಬುಧವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಆರೋಪಿಗಳಾದ ಸಬ್ ರಿಜಿಸ್ಟ್ರಾರ್ ಸಂಜೀವ ವೀರಭದ್ರ ಕಪಾಲಿ ಹಾಗೂ ಸ್ಥಳೀಯ ಬಾಂಡ್ ರೈಟರ್ ಶಿವಯೋಗಿ ಶಂಕರಯ್ಯ ಮಲ್ಲಯ್ಯನವರ ಇಬ್ಬರನ್ನೂ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೊದಲ ಆರೋಪಿ ಸಂಜೀವ ಕಪಲಿ ದಾಖಲೆ ಪತ್ರಗಳನ್ನು ನೀಡಲು ವಿನಾಕಾರಣ ವಿಳಂಬ ಧೋರಣೆ ತೋರುವುದಲ್ಲದೆ, ಕೇಳಿದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಶಿವಪ್ಪ ವರಗಣ್ಣವರ ಎಂಬವರು ಎಸಿಬಿಗೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಲಂಚ ಪಡೆಯುವ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಹಿಡಿದು ಬಂಧಿಸಿದ್ದಾರೆ. ಎಸಿಬಿ (ಉತ್ತರ ವಲಯ) ಎಸ್ಪಿ ಬಿ.ಎಸ್.ನೇಮಗೌಡ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್ಪಿ ಕರುಣಾಕರಶೆಟ್ಟಿ ಮತ್ತು ಇನಸ್ಪೆಕ್ಟರ್ ಎ.ಎಸ್.ಗುದಿಗೊಪ್ಪ ಇವರ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಯಿತು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *