Breaking News

LOCAL NEWS

ಮನೆ ಗೋಡೆ ಕುಸಿದು ಅಜ್ಜಿಯ ಸಾವು.

ಬೈಲಹೊಂಗಲ-ಮನೆ ಗೋಡೆ ಕುಸಿದು ಆಸ್ಪತ್ರೆಗೆ ದಾಖಲಾಗಿದ್ದ 94 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನೊಪ್ಪಿದ ಘಟನೆ,ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಈರಮ್ಮ ಪತ್ರೆಮ್ಮನವರ (95) ಮೃತ ದುರ್ದೈವಿ ಮಳೆಯಿಂದ ನಾಲ್ಕು ದಿನಗಳ ಹಿಂದೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿತ್ತು. ಘಟನೆಯಲ್ಲಿ ವೃದ್ಧೆ ಸೇರಿ 13 ಜನ ಕುಟುಂಬ ಸದಸ್ಯರಿಗೆ ಗಾಯಗಳಾವೆ.ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಪತ್ರೆಮ್ಮನವರ ಮೃತಪಟ್ಟಿದ್ದು ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಅಲರ್ಟ್..ಅಲರ್ಟ್..ಅಲರ್ಟ್….!!

ಹಠಾತ್ ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ ಬೆಳಗಾವಿ, ಜು.25(ಕರ್ನಾಟಕ ವಾರ್ತೆ): ಹವಾಮಾನ ಇಲಾಖೆಯು ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಖಾನಾಪುರ ಸೇರಿದಂತೆ ಜಿಲ್ಲೆಯ ಜನರು ಕೂಡ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್)ದ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಬೆಳಗಾವಿ ಜಿಲ್ಲೆಯ …

Read More »

ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನ ಶಾಲೆಗಳಿಗೆ ರಜೆ..

ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ ಬೆಳಗಾವಿ, -ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ …

Read More »

ನಾಳೆ ಬೆಳಗಾವಿ ಜಿಲ್ಲೆಯ ಯಾವ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಇದೆ,ಗೊತ್ತಾ..??

ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ ಬೆಳಗಾವಿ, -: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ …

Read More »

ನದಿ, ಹಳ್ಳ ,ದಾಟಲು ಖಾನಾಪೂರದಲ್ಲಿ ಕಿರುಸೇತುವೆ ನಿರ್ಮಾಣಕ್ಕೆ ಚಿಂತನೆ-ಜಾರಕಿಹೊಳಿ

ಬೆಳಗಾವಿ, ): ಮಳೆಗಾಲದಲ್ಲಿ ಖಾನಾಪುರ ಸೇರಿದಂತೆ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ನದಿ ದಾಟಲು ಅನುಕೂಲವಾಗುವಂತೆ ಕಿರುಸೇತುವೆಗಳನ್ನು ನಿರ್ಮಿಸುವ ಬಗ್ಗೆ ವಿಶೇಷ ಯೋಜನೆಯನ್ನು ಜಾರಿಗೆ ತರುವ ಚಿಂತನೆ ನಡೆಸಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಖಾನಾಪುರ ತಾಲ್ಲೂಕಿನ ಭೂರಣಕಿ ಗ್ರಾಮಕ್ಜೆ ಭೇಟಿ ನೀಡಿ ಮನೆಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ನದಿ ದಾಟಲು …

Read More »

ಗೋಕಾಕ್ ಸಾಹುಕಾರ್,ಎಲ್ಲಿದ್ದಾರೆ..? ಯಾರಿಗೆ,ಯಾತಕ್ಕೆ ಭೇಟಿಯಾಗಿದ್ದಾರೆ ಗೊತ್ತಾ..??

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೆ ರಾಜಕಾರಣದಲ್ಲಿ ಅಪರೇಶನ್ ಮಾಸ್ಟರ್ ಮೈಂಡ್ ಖ್ಯಾತಿಯ ರಮೇಶ ಜಾರಕಿಹೊಳಿ ನಡೆಯ ಸುತ್ತ ಅನುಮಾನ ಹುತ್ತ ಹುಟ್ಟಿಕೊಂಡಿದೆ. ಹೊಸ ಸರಕಾರ ರಚನೆ ಆದಾಗಿನಿಂದ ರಮೇಶ ಜಾರಕಿಹೊಳಿ ಜಿಲ್ಲೆಯಲ್ಲಿ ಕಾಣಿಸಿಕೊಳ್ಳುತ್ತಲೇ ಇಲ್ಲ. ಈಚೆಗೆ ಮಹಾರಾಷ್ಟ್ರದಲ್ಲಿ ನಡೆದ ಆಪರೇನ್ ಎನ್ ಸಿಪಿ ಕಾರ್ಯಾಚರಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಈಗ ಮಾಜಿ ಸಿಎಂ …

Read More »

ಬೆಳಗಾವಿ ಗಡಿವಿವಾದ, ಮಹಾರಾಷ್ಟ್ರ ಸರ್ಕಾರಕ್ಕೆ ಮರಾಠಿಗರಿಂದಲೇ ತಿರುಗುಬಾಣ…!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಮಹಾರಾಷ್ಟ್ರದ ಗಡಿಯಲ್ಲಿರುವ ಗ್ರಾಮ ಪಂಚಾಯಿತಿ ಗಳಲ್ಲಿ ಈ ಮೊದಲು ಮರಾಠಿಗರು ನಮ್ಮ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ನಿರ್ಣಯ ಕೈಗೊಳ್ಳುವ ವಾಡಿಕೆ ಇತ್ತು ಆದ್ರೆ ನಿನ್ನೆಯ ದಿನ ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಕಾಗಲ್ ತಾಲ್ಲೂಕಿನ ಹತ್ತು ಗ್ರಾಮ ಪಂಚಾಯ್ತಿಗಳಲ್ಲಿ ಮಹಾರಾಷ್ಟ್ರದ ಹತ್ತು ಹಳ್ಳಿಗಳನ್ಬು ಕರ್ನಾಟಕಕ್ಕೆ ಸೇರಿಸಿ ಎಂದು ಠರಾವ್ ಪಾಸ್ ಮಾಡುವ ಮೂಲಕ ಮಹಾರಾಷ್ಟ್ರ ಗಡಿಯ ಮರಾಠಿ ಭಾಷಿಕರು ಮಹಾರಾಷ್ಟ್ರ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. …

Read More »

ಖಾನಾಪುರ: ಶಾಲೆಗಳಿಗೆ ಇಂದು ಮಂಗಳವಾರ ರಜೆ ಘೋಷಣೆ.

ಬೆಳಗಾವಿ, -): ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು‌.25) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ. ***

Read More »

ಎಲ್ಲ ವಿಕಲಚೇತನರಿಗೆ ವಾಹನ-ಸಚಿವೆ ಹೆಬ್ಬಾಳಕರ್..

ಬೆಳಗಾವಿ-ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದು ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಹೆಸ್ಕಾಂ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು. ಬಾಡಿಗೆ ಕಟ್ಟಡಗಳಲ್ಲಿರುವ …

Read More »

ಹೊಸದಾಗಿ ಬೆಳಗಾವಿ ಡಿಸಿ ಕಚೇರಿ ನಿರ್ಮಿಸಲು ನಿರ್ಧಾರ.

ಬೆಳಗಾವಿ ನಗರದಲ್ಲಿ ನಿರ್ಮಿಸಲು ಉದ್ಧೇಶಿಸಲಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಡಿಪಿ ಸಭೆಯಲ್ಲಿ ಮಾಹಿತಿಯನ್ನು ನೀಡಿದರು. ಸದ್ಯಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲಭ್ಯವಿರುವ ಒಟ್ಟಾರೆ 9 ಎಕರೆ ಜಾಗೆಯಲ್ಲಿ ಎರಡು ಎಕರೆ ಜಾಗೆಯನ್ನು ಬಳಸಿಕೊಂಡು ಜಿಲ್ಲಾಧಿಕಾರಿ ಕಚೇರಿಯನ್ನು ನಿರ್ಮಿಸಲು ಉದ್ಧೇಶಿಸಲಾಗಿದೆ. ಉಳಿದ ಜಾಗೆಯಲ್ಲಿ ಪಾರ್ಕಿಂಗ್, ಉದ್ಯಾನ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ಈ ಯೋಜನೆ ಕುರಿತು ಜನ ಪ್ರತಿನಿಧಿಗಳು ಮತ್ತು ಸಂಬಂಧಿಸಿದ ಇಲಾಖೆಯ …

Read More »