Breaking News

LOCAL NEWS

ಬೈಲಹೊಂಗಲ- ಮಲಪ್ರಭೆಯ ತೀರದಲ್ಲಿ ಮೊಸಳೆಗಳ ಹಾವಳಿ…!!

ಬೆಳಗಾವಿ- ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ‌. ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ‌. ಮಲಪ್ರಭಾ ನದಿಯ ನವೀಲುತೀರ್ಥ ಜಲಾಶಯ ಭರ್ತಿಯಾಗಿದೆ.ಖಾನಾಪೂರದಿಂದ ಸವದತ್ತಿಯವರೆಗೆ ಹರಿಯುವ ಮಲಪ್ರಭಾ ನದಿ ತೀರದಲ್ಲಿ ಮೊಸಳೆಗಳು ಕಾಣಿಸಿಕೊಂಡಿದ್ದು ನದಿ ತೀರದ ಗ್ರಾಮಸ್ಥರು ಎಚ್ಚರಿಕೆ ವಹಿಸುವದು ಅಗತ್ಯವಾಗಿದೆ. ಬೈಲಹೊಂಗಲ ಪ್ರದೇಶದ ಮಾಟೊಳ್ಳಿ ಗ್ರಾಮ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ.ಇದನ್ನು ಮೋಬೈಲ್ ಗಳಲ್ಲಿ ವಿಡಿಯೋ ಮಾಡಿ ಈ ಬಾಗದ ಜನ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ …

Read More »

ಬೆಳಗಾವಿಯ ಮಂಗಾಯಿ ಜಾತ್ರೆಯಲ್ಲಿ ಪ್ರಾಣಿಬಲಿ ತಡೆಯಿರಿ – ಶ್ರೀಗಳು

ಶ್ರೀಗಳು ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತರಿಗೆ ಸಲ್ಲಿಸಿದ ಮನವಿಯ ಸಾರಾಂಶ. ಇಲ್ಲಿದೆ ಓದಿ…. ಮಾನ್ಯ ಸುದ್ದಿ ಸಂಪಾದಕರು/ ಪ್ರಧಾನ ವರದಿಗಾರರು, ಪ್ರಿಂಟ್ ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ಬೆಳಗಾವಿ. ವಿಷಯ :- ಬೆಳಗಾವಿಯ ವಡಗಾಂವ್ ನ ಶ್ರೀ ಮಂಗಾಯಿ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ತಡೆಯಲು ಸರ್ಕಾರ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮತ್ತು ಪ್ರಾಣಿಬಲಿ ತ್ಯಜಿಸಿ ಸಾತ್ವಿಕ- ಅಹಿಂಸಾತ್ಮಕವಾಗಿ ಪೂಜೆ ಸಲ್ಲಿಸಲು ಭಕ್ತರಲ್ಲಿ ವಿನಂತಿ. ಮಾನ್ಯರೇ ಇದೇ ಜುಲೈ ತಿಂಗಳ …

Read More »

ಗೋಕಾಕಿನಲ್ಲಿ ಪ್ರವಾಹದ, ಶಾಕ್ ಮತ್ತು ಹಾರ್ಟ್ ಅಟ್ಯಾಕ್…!!

ಬೆಳಗಾವಿ- ಗೋಕಾಕಿನಲ್ಲಿ ನೀರು ನುಗ್ಗಿದೆ ಮನೆಯೂ ಮುಳುಗುತ್ತದೆ ಎಂದು ತಿಳಿದುಕೊಂಡ ಮನೆಯ ಯಜಮಾನನಿಗೆ ಶಾಕ್ ಆಗಿ,ಹಾರ್ಟ್ ಅಟ್ಯಾಕ್ ಆಗಿ,ಆತನ ಅಂತ್ಯ ಸಂಸ್ಕಾರ ಮುಗಿಸಿ ಕುಟುಂಬಸ್ಥರು ಮನೆಗೆ ಬರುವಷ್ಟರಲ್ಲಿ ಮನೆಯೂ ನೀರಿನಲ್ಲಿ ಮುಳುಗಿ ಮೃತ ಯಜಮಾನನ ಕುಟುಂಬಸ್ಥರು ಕಾಳಜಿ ಕೇಂದ್ರಕ್ಕೆ ಶಿಪ್ಟ್ ಆದ ಘಟನೆ ಗೋಕಾಕಿನಲ್ಲಿ ನಡೆದಿದೆ. ಮನೆಗೆ ನೀರು ನುಗ್ಗಿದ ವಿಚಾರ ಕೇಳಿ,ಹೃದಯಾಘಾತದಿಂದ ಮನೆ ಯಜಮಾನ ಸಾವನ್ನಪ್ಪಿದ್ದಾನೆ.ನಿನ್ನೆ ಸಂಜೆ ಮನೆಗೆ ನೀರು ಬರುವ ವಿಚಾರ ತಿಳಿದು ದಶರಥ ಬಂಡಿ(80) ನಿನ್ನೆ …

Read More »

ಬೆಳಗಾವಿಯಿಂದ ಗೋಕಾಕಿಗೆ ಹೋಗಲು,ಬರಲು ಈಗ ಉಳಿದಿದ್ದು ಒಂದೇ ದಾರಿ….!!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳ ನೀರಿನಿಂದ ನದಿ ತೀರದ ಗ್ರಾಮಗಳ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗಾವಿಯಿಂದ ಗೋಕಾಕಿಗೆ ಹೋಗುವ ಬಹುತೇಕ ಎಲ್ಲ ಮಾರ್ಗಗಳು ಮುಳುಗಡೆಯಾಗಿದ್ದು ಗೋಕಾಕಿಗೆ ಹೋಗಲು, ಬರಲು ಈಗ ಒಂದೇ ಮಾರ್ಗ ಸುರಕ್ಷಿತವಾಗಿದೆ. ಗೋಕಾಕಿನಲ್ಲಿ ಘಟಪ್ರಭೆಯ ಅಬ್ಬರ ಹೆಚ್ಚಾಗಿದ್ದು ಲೋಳಸೂರ ಸೇತುವೆ ಮತ್ತು ಗೋಕಾಕ್- ಕೊನ್ನೂರ್ ಗೆ ಹೋಗುವ ಫಾಲ್ಸ್ ರಸ್ತೆಯಲ್ಲಿರುವ ಮಾರ್ಕಂಡೆಯ ನದಿಯ ಸೇತುವೆಯೂ ಮುಳುಗಡೆಯಾಗಿದ್ದು ಈ ಎರಡೂ ಮಾರ್ಗಗಳಲ್ಲಿ ಸಂಚಾರ ಬಂದ್ ಆಗಿದೆ. ಬೆಳಗಾವಿಯಿಂದ …

Read More »

ಹಲಗಲು ಪ್ರವಾಹ ವೀಕ್ಷಣೆ, ರಾತ್ರಿ ಅಧಿಕಾರಿಗಳ ಸಭೆ ನಡೆಸಿದ ಸಾಹುಕಾರ್

ಇಂದು ಶುಕ್ರವಾರ ದಿನವಿಡೀ ಖಾನಾಪೂರ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಖಾನಾಪೂರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಖಾನಾಪೂರದಿಂದ ಬೆಳಗಾವಿಗೆ ಆಗಮಿಸಿ ರಾತ್ರಿ  9 ಗಂಟೆಯವರೆಗೆ ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಿರಂತರ ಮಳೆ ಮತ್ತು ಪ್ರವಾಹದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು …

Read More »

ಬೆಳಗಾವಿಯಲ್ಲಿ 300 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ

ಬೆಳಗಾವಿ- ಸಪ್ತರ್ಷಿಗಳ ದಾನ, ಅಷ್ಠ ಋಷಿ ಡಾ.ಪ್ರಭಾಕರ್ ಕೋರೆ ಅವರ ಶ್ರಮದಾನದಿಂದ ಹಳ್ಳಿಯಿಂದ ದೆಹಲಿಗೆ ,ದೆಹಲಿಯಿಂದ ದುಬಾಯಿ ವರೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಸೇವೆಯನ್ನು ವಿಸ್ತರಿಸಿರುವ ಬೆಳಗಾವಿಯ ಕೆಎಲ್ಇ ಸಂಸ್ಥೆ ಈಗ ಬೆಳಗಾವಿಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡುತ್ತಿದೆ. ಬೆಳಗಾವಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೆಎಲ್ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಲು ಸಂಸ್ಥೆಯ ಕಾರ್ಯಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಗೌರವಾನ್ವಿತ ರಾಷ್ಟ್ರಪತಿ ಮಾನ್ಯ ದ್ರೌಪದಿ …

Read More »

ವ್ಯಾಪಕ‌ ಮಳೆ: ಜು.27 ರಂದು ಶಾಲಾ-ಕಾಲೇಜು‌ ರಜೆ

ಬೆಳಗಾವಿ, ಜು.26(ಕರ್ನಾಟಕ ವಾರ್ತೆ): ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ(ಜುಲೈ 27) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ‌ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಆದೇಶ ಹೊರಡಿಸಿದ್ದಾರೆ. ಮಳೆಯ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ.‌ ಮುಂಬರುವ ದಿನಗಳಲ್ಲಿ ಸದರಿ ರಜೆಯನ್ನು‌ ಸರಿದೂಗಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ …

Read More »

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ ರಜನೀಶ್‌ ಅವರನ್ನು ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್​ ಅವರು, …

Read More »

ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ಆರಂಭಿಸಿದ ಜಿಲ್ಲಾಡಳಿತ

  ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಭಯಂಕರವಾದ ಮಳೆ ಸುರಿಯುತ್ತಿದೆ.ಪಕ್ಕದ ಮಹಾರಾಷ್ಟ್ರದಲ್ಲೂ ವಿಪರೀತವಾಗಿ ಮಳೆ ಸುರಿಯುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಹರಿಯುತ್ತಿರುವ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಜಿಲ್ಲೆಯ ಜನರಿಗೆ ಮಳೆ ಮತ್ತು ಪ್ರವಾಹದ ಯಾವುದೇ ರೀತಿಯ ಸಮಸ್ಯೆ ಎದುರಾದರೆ, ತಕ್ಷಣವೇ ಸ್ಪಂದಿಸಲು ಬೆಳಗಾವಿ ಜಿಲ್ಲಾಡಳಿತ ಸಾರ್ವಜನಿಕರ ಅನಕೂಲಕ್ಕಾಗಿ ಸಹಾಯವಾಣಿ ಆರಂಭಿಸಿದೆ. ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಪ್ರವಾಹ ಎದುರಿಸಲು ಬೋಟುಗಳನ್ನು ತರಿಸಿದೆ.NDRF ತಂಡವೂ ಬೆಳಗಾವಿಗೆ ಬಂದಿದೆ.ಪ್ರವಾಹದಿಂದ ತುತ್ತಾಗುವ ಗ್ರಾಮಗಳ ಕುಟುಂಬಗಳನ್ನು …

Read More »

ಪ್ರವಾಹ ಎದುರಿಸಲು ಸನ್ನದ್ಧರಾಗಲು ಅಧಿಕಾರಿಗಳಿಗೆ ಸೂಚಿಸಿದ ಸಚಿವ ಜಾರಕಿಹೊಳಿ

ರಾಯಬಾಗ ತಾಲ್ಲೂಕಿಗೆ ಭೇಟಿ; ಪರಿಸ್ಥಿತಿಯ ಅವಲೋಕನ —————————————— ವ್ಯಾಪಕ‌ ಮಳೆ-ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, – ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು, ಗುರುವಾರ(ಜು.,25) ರಾಯಬಾಗ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿ ಮೇಲಿನ ಕುಡಚಿ ಸೇತುವೆ ಮುಳುಗಡೆಯಾಗಿದ್ದು, ನೀರಿನ …

Read More »