LOCAL NEWS

ಬೆಳಗಾವಿಯ ಪ್ರಥಮ ಕನ್ನಡದ ಮಹಾಪೌರ ಸಿದ್ಧನಗೌಡ ಪಾಟೀಲ ಇನ್ನಿಲ್ಲ.

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಪ್ರಪ್ರಥಮ ಕನ್ನಡದ ಮೇಯರ್ ಸಿದ್ಧನಗೌಡ ಪಾಟೀಲ ಇಂದು ನಿಧನರಾಗಿದ್ದಾರೆ. ಬೆಳಗಾವಿಯ ಹಿರಿಯ ಕನ್ನಡಪರ ಹೋರಾಟಗಾರರು ಆಗಿದ್ದ ಸಿದ್ಧನಗೌಡ ಪಾಟೀಲರು ಇಂದು ಬೆಳಿಗ್ಗೆ ನಿಧನರಾಗಿದ್ದು ಪ್ರಥಮ ಕನ್ನಡದ ಮೇಯರ್ ಆಗುವ ಮೂಲಕ ಸಿದ್ಧನಗೌಡ ಪಾಟೀಲರು ಬೆಳಗಾವಿ ಪಾಲಿಕೆಯಲ್ಲಿ ಕನ್ನಡದ ಪತಾಕೆ ಹಾರಿಸಿದ್ದರು

Read More »

ನಾಳೆ ಬೆಳಗಾವಿಗೆ ಮುತ್ತಿಗೆ ಹಾಕಲಿರುವ ಸಾವಿರಾರು ರಾಯಣ್ಣನ ಅಭಿಮಾನಿಗಳು…..!

ಬೆಳಗಾವಿ- ಪೀರನವಾಡಿಯಲ್ಲಿ ಕ್ರಾಂತಿವೀರ ,ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವ ವಿಷಯವನ್ನು ಬೆಳಗಾವಿ ಜಿಲ್ಲಾಡಳಿತ ತಿಳಿದುಕೊಂಡಷ್ಟು ಹಗುರವಾಗಿಲ್ಲ,ಯಾಕಂದ್ರೆ ದಿನಕಳೆದಂತೆ ಈ ಸಮಸ್ಯೆ ಜಟಿಲವಾಗುತ್ತಿದ್ದು ನಾಳೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಅಭಿಮಾನಿಗಳು ಬೆಳಗಾವಿಗೆ ಮುತ್ತಿಗೆ ಹಾಕಲಿದ್ದಾರೆ. ರಾಜ್ಯದ ಎಲ್ಲ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬೆಳಗಾವಿಗೆ ಬರುತ್ತಿರುವ ರಾಯಣ್ಣನ ಅಭಿಮಾನಿಗಳು ಬೆಳಗಾವಿಯ ಸುವರ್ಣ ವಿಧಾನಸೌಧ ದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹ …

Read More »

ಗಡಿಯಲ್ಲಿ ಮತ್ತೆ ಶಿವಸೇನೆಯ ಪುಂಡಾಟಿಕೆ,

ಬೆಳಗಾವಿ:ಕಾಲು ಕೆದರಿ ಜಗಳ ತೆಗೆಯೋದು ಶಿವಸೇನೆಯ ಹುಟ್ಟುಗುಣ,ಮನಗುತ್ತಿಯ ಹಿರಿಯರು ಕೂಡಿಕೊಂಡು ಶಿವಾಜಿ ಮೂರ್ತಿಯ ವಿವಾದವನ್ನು ಅತ್ಯಂತ ಸೌಹಾರ್ದಯುತವಾಗಿ ಬಗೆಹರಿಸಿಕೊಂಡರೂ ಶಿವಸೇನೆಗೆ ಇದನ್ನು ಸಹಿಸಲು ಸಾದ್ಯವಾಗುತ್ತಿಲ್ಲ,ಕೊಲ್ಹಾಪುರ ಶಿವಸೇನೆಯ ಪ್ರಮುಖರು ಇಂದು ಕರ್ನಾಟಕದ ಗಡಿಯೊಳಗೆ ನುಗ್ಗಿ ಮತ್ತೆ ಕ್ಯಾತೆ ತೆಗೆದು,ತೆರವು ಗೊಳಿಸಿದ ಸ್ಥಳದಲ್ಲೇ ಶಿವಾಜಿ ಮೂರ್ತಿ ಮುರು ಪ್ರತಿಷ್ಠಾಪನೆ ಮಾಡಬೇಕೆಂದು ಪುಂಡಾಟಿಕೆ ಪ್ರದರ್ಶಿಸಿದ್ದಾರೆ ಇತ್ತೀಚಿಗೆ ರಾಜ್ಯಾದ್ಯಂತ ಗಮನ ಸೆಳೆದು, ತಣ್ಣಗಾಗಿದ್ದ ಮನಗುತ್ತಿ ಗ್ರಾಮದಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿಚಾರ ಗಡಿಯಲ್ಲಿ ಮತ್ತೆ …

Read More »

ಮಲಪ್ರಭಾ ಒತ್ತುವರಿ,ಆದಷ್ಟು ಬೇಗನೆ ಸರ್ವೇ- ರಮೇಶ್ ಜಾರಕಿಹೊಳಿ

ಬೆಳಗಾವಿ- ಮಲಪ್ರಭಾ ನದಿ ಒತ್ತುವರಿ ಆಗಿದ್ದು ಆದಷ್ಟು ಬೇಗ ಸರ್ವೆ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ಮತ್ತು ಆಲಮಟ್ಟಿಯಲ್ಲಿ ಸಿಎಂ ಸ್ಥಳೀಯ ಜನಪ್ರತಿನಿಧಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ, ಬೆಂಗಳೂರಿಗೆ ಹೋಗಿ ಮತ್ತೊಮ್ಮೆ ಸಭೆ ಮಾಡಿ ಜಿಲ್ಲಾವಾರು ಪರಿಹಾರ ನೀಡಲು ತೀರ್ಮಾನ ಕೈಗೊಳ್ಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ಮಳೆಯಿಂದಾಗಿ ಹಾನಿಯಾಗಿದೆ ಪ್ರವಾಹದಿಂದ …

Read More »

ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣ ಬಿಮ್ಸ್ ಗೆ ಸಮರ್ಪಿಸಿದ ಸಿಎಂ ಯಡಿಯೂರಪ್ಪ

ಬೆಳಗಾವಿ-: ಕೋವಿಡ್-೧೯ ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲರು ಕೊಡಮಾಡಿದ ಈ ಉಪಕರಣಗಳನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯ ಬಳಿಕ ಈ ಉಪಕರಣಗಳನ್ನು ಮುಖ್ಯಮಂತ್ರಿಗಳು ಆಸ್ಪತ್ರೆಗೆ ನೀಡಿದರು. ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಪಾಟೀಲ ಅವರು ನೀಡಿದ್ದಾರೆ. …

Read More »

ಅತಿವೃಷ್ಟಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

– ಬೆಳಗಾವಿ, -: ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಅತಿವೃಷ್ಟಿಗೆ ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ(ಆ.25) ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ …

Read More »

ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ಜಾರಕಿಹೊಳಿ

ಬೆಳಗಾವಿ,-ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ ಸೋಮವಾರ (ಆ.24) ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ …

Read More »

ಸತೀಶಣ್ಣಾ ಮಂಜೂರು ಮಾಡಿದ ಜಿಟಿಟಿಸಿ ಕೇಂದ್ರದ ಕಾಮಗಾರಿ ಈಗ ಫಿನಿಶ್….!

  ಬೆಳಗಾವಿ- ಟೀಕೆಗಳು ಸಾಯುತ್ತವೆ ಮಾಡಿದ ಕೆಲಸಗಳು ಮಾತ್ರ ಉಳಿಯುತ್ತವೆ,ಮಾಡಿದ ಕೆಲಸಗಳೇ ಸಾಧಕನ ಸಾಧನೆಯ ಪಾಠ ಹೇಳುತ್ತವೆ ,ಎನ್ನುವದಕ್ಕೆ ಗೋಕಾಕ ತಾಲ್ಲೂಕಿನ ಅರಭಾಂವಿಯಲ್ಲಿ ಸ್ಥಾಪನೆಗೊಂಡು ಉದ್ಘಾಟನೆಗೆ ರೆಡಿಯಾಗಿರುವ ಜಿಟಿಟಿಸಿ ಕೇಂದ್ರವೇ ಅದಕ್ಕೆ ಸಾಕ್ಷಿಯಾಗಿದೆ. Govt tools room and training centre ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಣ್ಣ ಕೈಗಾರಿಕಾ ಸಚಿವರಾಗಿದ್ದಾಗ ರಾಜ್ಯದ,ಕೊಪ್ಪಳ ಉಡುಪಿ ಸೇರಿದಂತೆ ನಾಲ್ಕು ಜಿಟಿಟಿಸಿ ಕೇಂದ್ರಗಳನ್ನು ಮಂಜೂರು ಮಾಡಿದ್ದರು,ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು ಇಲ್ಲಿಯ …

Read More »

ಬೆಳಗಾವಿಗೆ ಸೋಮವಾರ ಡಿಕೆಶಿ ಭೇಟಿ ಕಾರ್ಯಕ್ರಮ ಮುಂದೂಡಿಕೆ

ಬೆಳಗಾವಿ: ಆ. 24 ರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಮ್ಮಿಕೊಂಡಿದ್ದ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ನೆರೆ ವಿಕ್ಷಣೆ ಪ್ರವಾಸವನ್ನು ಮುಂದೂಡಲಾಗಿದೆ. ಈ ಕುರಿತು ಪ್ರಕಟಣೆ ಬಿಡುಗಡೆಗೊಳಿಸಿರುವ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಕಾರಣಾಂತರಗಳಿಂದ ಅಧ್ಯಕ್ಷರ ಜಿಲ್ಲಾ ಪ್ರವಾಸವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಆ.24 ರಂದು ಬೆಳಗಾವಿ ಮತ್ತು 25 ರಂದು ಬಾಗಲಕೋಟೆ ಜಿಲ್ಲೆಗಳ ಪ್ರವಾಸವನ್ನು ಡಿ.ಕೆ.ಶಿವಕುಮಾರ್ ಹಮ್ಮಿಕೊಂಡಿದ್ದರು. The Tomorrows Tour Programme of Hon’ble …

Read More »

ಬೆಳಗಾವಿಯ ಪೋಲೀಸ್ ಠಾಣೆಗಳಲ್ಲಿ ಓನ್ಲೀ ಒನ್ ಡೇ ಹಬ್ಬ

ಬೆಳಗಾವಿ- ಬೆಳಗಾವಿ ನಗರದ ಬಹುತೇಕ ಎಲ್ಲ ಪೋಲೀಸ್ ಠಾಣೆಗಳಲ್ಲಿ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ.ಪ್ರತಿವರ್ಷ ಎಲ್ಲ ಠಾಣೆಗಳಲ್ಲಿ ಗಣೇಶ ಹಬ್ಬದ ನಿಮಿತ್ಯ ಮಹಾಪ್ರಸಾದ ಆಯೋಜಿಸುವದು ಬೆಳಗಾವಿ ನಗರದ ಸ್ಪೇಶ್ಯಾಲಿಟಿ. ಈ ವರ್ಷ ಕೊರೋನಾ ಸಂಕಷ್ಟ,ಜನ ಸೇರಬಾರದು,ಸಾಮಾಜಿಕ ಅಂತರ ಕಾಯ್ದುಕೊಳ್ಳುವದರ ಜೊತೆಗೆ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಬೆಳಗಾವಿಯ ನಗರ ಪೋಲೀಸ್ ಇಲಾಖೆ ನಿರ್ಧರಿಸಿದ್ದು,ಈ ವರ್ಷ. ಬೆಳಿಗ್ಗೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ,ಬೆಳಿಗ್ಗೆಯಿಂದ ಸಂಜೆಯವರೆಗೆ ಗಣೇಶನನ್ನು ಆರಾಧಿಸಿ ಸಂಜೆ ಹೊತ್ತಿಗೆ ಗಣೇಶ …

Read More »