Breaking News

LOCAL NEWS

ಬೆಳಗಾವಿ;ಮೂರು ವರ್ಷದ ಕಂದಮ್ಮನ ಕೊಲೆ

ಬೆಳಗಾವಿ-ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ ಮ‌ೂರು ವರ್ಷದ ಕಂದಮ್ಮ? ಹೌದು ಇಂತಹ ಘಟನೆ ನಡೆದಿರುವದು ಬೆಳಗಾವಿಯಲ್ಲಿ,ಮಲತಾಯಿಯಿಂದ ಮೂರು ವರ್ಷದ ಕಂದಮ್ಮನ ಕೊಲೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಂಗ್ರಾಳಿ ಕೆ.ಹೆಚ್ ಗ್ರಾಮದಲ್ಲಿ ವಾಸವಿದ್ದ ಕುಟುಂಬ.ಮಲತಾಯಿ ಸಪ್ನಾ ನಾವಿ ಮೂರು ವರ್ಷದ ಸಮೃದ್ಧಿ(3) ಕೊಲೆ ಮಾಡಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ.ಇಂದು ಬೆಳಗ್ಗೆ ಬಾಲಕಿಯ ಮೇಲೆ ಕ್ರೌರ್ಯ ಮೆರೆದು ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬಾಲಕಿ ಸಮೃದ್ದಿ ಅಜ್ಜಿ ಹಾಗೂ ಚಿಕ್ಕಪ್ಪನಿಂದ ಸಪ್ನಾ …

Read More »

ಕೆಎಲ್ಇ ಆಸ್ಪತ್ರೆಯಲ್ಲಿ ಹೊಸ ಟೆಕ್ನಾಲಾಜಿ ಸೇವೆಗೆ ಸಮರ್ಪಣೆ..

ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಗ್ಯಾಸ್ಟ್ರೋಎಂಟ್ರಾಲಾಜಿ ವಿಭಾಗದಲ್ಲಿ ನೂತನವಾಗಿ ಅಳವಡಿಸಲಾಗಿರುವ ಇಯುಎಸ್‌ ಎಂಡೋಸ್ಕೋಪಿ ಮತ್ತು ಅಲ್ಟ್ರಾಸೌಂಡ್‌ನ ನೂತನ ಸೇವೆಯನ್ನು ಶ್ರೀ ಹೆಚ್‌ ಎನ್‌ ರಿಲಯನ್ಸ ಫೌಂಡೇಶನ್ ಆಸ್ಪತ್ರೆಯ ಇನ್ಸಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಸೈನ್ಸನ ಮುಖ್ಯಸ್ಥರು ಹಾಗೂ ಎಂಡೋಸ್ಕೋಪಿ ತಜ್ಞವೈದ್ಯರಾದ ಡಾ. ಅಮಿತ ಮೆಡಿಯೋ ಅವರಿಂದಿಲ್ಲಿ ಜನಸೇವೆಗೆ ಅರ್ಪಿಸಿದರು. ನಂತರ ಮಾತನಾಡಿದ ಅವರು. ಆಧುನಿಕತೆ ಬೆಳೆದಂತೆ ವೈದ್ಯ ವಿಜ್ಞಾನ ಸಾಕಷ್ಟು ಪ್ರಗತಿ ಹೊಂದುತ್ತಿದೆ. ಅದರಂತೆ …

Read More »

ಕರ್ನಾಟಕದ ಬೇಡಿಕೆಗೆ ಮಹಾರಾಷ್ಟ್ರದಿಂದ ಕ್ವಿಕ್ ರಿಸ್ಪಾನ್ಸ್….!!

ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾ ಸಿಎಂ ಏಕನಾಥ ಸಿಂಧೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕೊಯ್ನಾ ಡ್ಯಾಮ್ ನಿಂದ …

Read More »

ಚಾಕುವಿನಿಂದ ಇರಿದು, ಬೆಳಗಾವಿ ಜಿಲ್ಲೆಯಲ್ಲಿ ಡಬಲ್ ಮರ್ಡರ್….

ಬೆಳಗಾವಿ: ಅಪ್ರಾಪ್ತ ಮಗಳಿಗೆ ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ತಂದೆಯೇ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ದುಂಡನಕೊಪ್ಪ ಗ್ರಾಮದ ಯಲ್ಲಪ್ಪ ಸೋಮಪ್ಪ ಹಳೇಗೋಡಿ (22), ಮಾಯಪ್ಪ ಸೋಮಪ್ಪ ಹಳೇಗೋಡಿ (20) ಕೊಲೆಯಾದ ಸಹೋದರರು. ಅದೇ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಕೊಲೆ ಮಾಡಿರುವ ಆರೋಪಿ. ಆರೋಪಿ ಫಕೀರಪ್ಪನ‌ ಅಪ್ರಾಪ್ತ ಪುತ್ರಿಯನ್ನು ಪ್ರೀತಿಸುವಂತೆ ಮಾಯಪ್ಪ …

Read More »

ಬೆಳಗಾವಿಯ ಖ್ಯಾತ ಸಾಮಾಜಿಕ ಕಾರ್ಯಕರ್ತ ರಂಗನಾಥ ಪೋತದಾರ ನಿಧನ

ಬೆಳಗಾವಿ : ಬೆಳಗಾವಿಯ ಖ್ಯಾತ ಸಾಮಾಜಿಕ ಕಾರ್ಯಕರ್ತರಾಗಿದ್ದ ರಂಗನಾಥಪೋತದಾರ (85) ಮಂಗಳವಾರ ಪುಣೆಯ ತಮ್ಮ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಗಳು ಇದ್ದಾರೆ. ಬೆಳಗಾವಿ ಅನಂತಶಯನಗಲ್ಲಿ ನಿವಾಸಿಯಾಗಿದ್ದ ಅವರು ಬೆಳಗಾವಿ ಮಹಾನಗರ ಪಾಲಿಕೆ ವಾರ್ಡ್ ನಂಬರ್ 31ರ ನಗರಸೇವಕರಾಗಿ ಸೇವೆ ಸಲ್ಲಿಸಿದ್ದರು. ಟಿಳಕ್ ಚೌಕ್ ಸಾರ್ವಜನಿಕ ಗಣೇಶೋತ್ಸವ ಮಂಡಳದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ 50 ವರ್ಷಗಳಿಗೂ ಹೆಚ್ಚು ಕಾಲ ದುಡಿದಿದ್ದರು. ಪೋತದಾರ ಮನೆತನದ …

Read More »

ಬೆಳಗಾವಿ ಜಿಲ್ಲೆಯಲ್ಲಿ ಶೇ.74.87 ರಷ್ಟು ,ಮತದಾನ

      ಬೆಳಗಾವಿ, -ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಮೂರು ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ. 01- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶೇ.78.51 ಮತ್ತು 02-ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಶೇ.71.38ರಷ್ಟು ಮತದಾನವಾಗಿರುತ್ತದೆ. ಇದಲ್ಲದೇ ಕೆನರಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.87 ಮತ್ತು ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. 76.25 ರಷ್ಟು …

Read More »

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ.07 ರಂದು ನಡೆಯಲಿದ್ದು, ಸುಗಮ‌ ಮತ್ತು ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು‌ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರವಿವಾರ (ಮೇ.05) ನಡೆದ ಪತ್ರಿಕಾಗೋಷ್ಠಿಯಲ್ಲಿ ಮೆ.07 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆ …

Read More »

ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅರೆಸ್ಟ್…..

ಬೆಳಗಾವಿ- ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಎ ಒನ್ ಆರೋಪಿಯಾಗಿಯಾಗಿರುವ ಜೆಡಿಎಸ್ ಶಾಸಕ ಹೆಚ್ ಡಿ.ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಧಾನಸೌಧದ ಹತ್ತಿರವಿರುವ ಎಸ್ ಐ ಟಿ ಕಚೇರಿಗೆ ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ರೇವಣ್ಣ ಇರುವ ಖಚಿತ ಮಾಹಿತಿ ಮೇರೆಗೆ ದೇವೇಗೌಡರ ಮನೆಯ ಮೇಲೆ ದಾಳಿ ಮಾಡಿದ ಎಸ್ ಐಟಿ ಅಧಿಕಾರಿಗಳು ಒಂದು ಗಂಟೆ ಕಾಲ …

Read More »

ಆಮೀಷಗಳಿಗೆ ಬಲಿಯಾಗಬೇಡಿ, -ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ಪರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತಬೇಟೆ ಮುಂದುವರೆಸಿದ್ದಾರೆ‌ ಶನಿವಾರದಂದು ಮೂಡಲಗಿ ತಾಲ್ಲೂಕಿನ ಅರಭಾವಿ, ಕಲ್ಲೊಳ್ಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ತೆರಳಿ ಮತ ಯಾಚಿಸಿದ ಅವರು, ಮೇ. ೭ ರಂದು ನಡೆಯುವ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು. ದೇಶದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯು ಉತ್ತಮ ಆಯ್ಕೆಯಾಗಿದೆ. ಪ್ರಧಾನಿ ನರೇಂದ್ರಮೋದಿಯವರಿಂದಾಗಿ ಭಾರತವು …

Read More »

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ ಅವರ ಸಮ್ಮುಖದಲ್ಲಿ ಮಾಜಿ ಎಂಎಲ್ಸಿ ವಿವೇಕ್ ರಾವ್ ಪಾಟೀಲ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಇಂದು ಹುಕ್ಕೇರಿಯಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಮಾಜಿ ವಿಧಾನ ಪರಿಷತ್ತಿನ ಸದಸ್ಯ ವಿವೇಕ್ ರಾವ್ ಬಿಜೆಪಿ ಸೇರ್ಪಡೆಯಾಗಲು ರೆಡಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿವೇಕ್ ರಾವ್ ಪಾಟೀಲ …

Read More »
Sahifa Theme License is not validated, Go to the theme options page to validate the license, You need a single license for each domain name.