Breaking News

LOCAL NEWS

ನಾಳೆ ಬೆಳಗಾವಿಯಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಕ್ಕೆ ಗಣ್ಯರ ದಂಡು

ಪತ್ರಿಕಾ ದಿನಾಚರಣೆ ನಾಳೆ; ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಬೆಳಗಾವಿ: ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ವತಿಯಿಂದ ಪತ್ರಿಕಾ ದಿನಾಚರಣೆ ನಾಳೆ ಭಾನುವಾರ ಬೆಳಗ್ಗೆ 11ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪತ್ರಿಕಾ ದಿನಾಚರಣೆ ಪ್ರಯುಕ್ತ ನಡೆದ ಕ್ರಿಕೆಟ್ ಪಂದ್ಯಾವಳಿ, ಕೇರಂ ಸ್ಪರ್ಧೆ, ಚೆಸ್ ಸ್ಪರ್ಧೆಯ ವಿಜೇತರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಹುಮಾನ ವಿತರಿಸಲಿದ್ದಾರೆ. ಸಂಘದ ಅಧ್ಯಕ್ಷ …

Read More »

ಖಡಕ್ ಪೋಲೀಸ್ ಅಧಿಕಾರಿ ಭರಮಣಿಗೆ ಅವಮಾನ, ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಳಗಾವಿ-ಸಿಎಂ ಖುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿರುವ ಸಿದ್ರಾಮಯ್ಯ ಸಹನೆ ಕಳೆದುಕೊಂಡಿದ್ದು ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳ ಜೊತೆ ಅಸಭ್ಯವಾಗಿ ವರ್ತಿಸತ್ತಿದ್ದಾರೆ,ಮುಖ್ಯಮಂತ್ರಿಗಳ ಅಸಭ್ಯ ವರ್ತನೆಯಿಂದ ಅಧಿಕಾರಿ ವರ್ಗ ಭೀತಿಯ ವಾತಾವರಣದಲ್ಲಿ ಕೆಲಸ ಮಾಡುವ ಪರಿಸ್ಥಿತಿ ಎದರಾಗಿದೆ ಎಂದು ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು,ಮುಖ್ಯಮಂತ್ರಿಗಳ ವರ್ತನೆಯಿಂದ,ಗೌರವಸ್ಥ, ಕ್ರಿಯಾಶೀಲ, ನಿಷ್ಠಾವಂತ ಸರ್ಕಾರಿ ಅಧಿಕಾರಿಗಳಿಗೆ ಅವಮಾನ ಆಗತ್ತಿದೆ. ಸಾರ್ವಜನಿಕವಾಗಿ ಬಹಿರಂಗ ವೇದಿಕೆಯಲ್ಲೇ ಅಪಮಾನಿಸುವುದು, ಏಕವಚನದಲ್ಲಿ ಸಂಬೋಧಿಸುವುದು, ಶ್ರದ್ಧೆಯಿಂದ …

Read More »

ಮದುವೆಗೆ ಪೋಷಕರು ಒಪ್ಪಲಿಲ್ಲ ಪ್ರೇಮಿಗಳ ಜೋಡಿ ಬದುಕಲಿಲ್ಲ…..!!

ಬೆಳಗಾವಿ- ಮರಕ್ಕೆ ಸೀಲೀಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ್ದೇವೆ.ಕೇಳಿದ್ದೇವೆ.ಆದ್ರೆ ಪ್ರೇಮಿಗಳ ಜೋಡಿ ಅಟೋದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಕೇಳಿ ನಂಬಲು ಆಗುತ್ತಿಲ್ಲ. ಆಟೋದಲ್ಲಿ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು ಓಡಿಸುತ್ತಿದ್ದ ಆಟೋದಲ್ಲೇ ಪ್ರಿಯತಮೆ ಜೊತೆ ಸೇರಿ ಆತ್ಮಹತ್ಯೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ. ಮುನವಳ್ಳಿ ಪಟ್ಟಣದ ರಾಘವೇಂದ್ರ …

Read More »

ನಾಳೆ ಗುರುವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ

  ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ,ಖಾನಾಪೂರ ಮತ್ತು ಕಿತ್ತೂರು ತಾಲ್ಲೂಕುಗಳ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೀಷಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ ನಾಳೆ ಗುರುವಾರ ದಿನಾಂಕ 26 ರಂದು ಜಿಲ್ಲೆಯ ಮೂರು ತಾಲ್ಲೂಕುಗಳ ಶಾಲೆಗಳಿಗೆ ರಜೆ ಮುಂದುವರೆಯುತ್ತದೆ.

Read More »

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಮವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಹಾಲು ಒಕ್ಕೂಟದಿಂದ ಕರ್ನಾಟಕ ಹಾಲು ಮಹಾ ಮಂಡಳಿಗೆ ನಿರ್ದೇಶಕನಾಗಿ ಆಯ್ಕೆಯಾಗುತ್ತೇನೆ. ಆದರೆ ಖಂಡಿತವಾಗಿಯೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ …

Read More »

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ ಗ್ರಾಮಸ್ಥರು ಮಠದಿಂದ ಹೊರಹಾಕಬೇಕೆಂಬ ಒತ್ತಡದ ಹಿನ್ನೆಲೆ ಅಡವಿಸಿದ್ದರಾಮ ಸ್ವಾಮಿಯನ್ನು ಗ್ರಾಮದ ಹಿರಿಯರು ಮಠದಿಂದ ಉಚ್ಛಾಟಿಸಿರುವ ಘಟನೆ ರವಿವಾರದಂದು ನಡೆಸಿದೆ. ಘಟನೆ ವಿವರ : ಶನಿವಾರದಂದು ಬಿಜಾಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದರು ಎನ್ನಲಾಗುತ್ತಿದೆ. ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು …

Read More »

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಳಂಬ ತೋರುವುದು ಕಂಡು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಜೂ.21) ನಡೆದ ಪರಿಶಿಷ್ಟ ಜಾತಿ/ …

Read More »

ಬೆಳಗಾವಿ, ಡಿಸಿಸಿ ಬ್ಯಾಂಕ್ ಚುನಾವಣೆಗೆ ರಾಹುಲ್ ಜಾರಕಿಹೊಳಿ ಎಂಟ್ರಿ….!!

ಬೆಳಗಾವಿ – ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕ್ ರಾಜಕಾರಣಕ್ಕೆ ಪ್ರವೇಶ ಪಡೆಯುವವರ ಹೆಬ್ಬಾಗಿಲು ಆಗಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಗೆ ಬೆಳಗಾವಿ ಜಿಲ್ಲೆಯಲ್ಲಿ ಭರ್ಜರಿ ತಯಾರಿ ನಡೆದಿದೆ. ಮಾಜಿ ಸಚಿವ ಬೆಳಗಾವಿ KMF ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚಿಗೆ ಖಾನಾಪೂರ ತಾಲ್ಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ಪದಾಧಿಕಾರಿಗಳ ಸಭೆ ನಡೆಸಿದ ಬೆನ್ನಲ್ಲಿಯೇ ಇಂದು ಬೆಳಗಾವಿ ತಾಲ್ಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ಪದಾಧಿಕಾರಿಗಳ ಸಭೆಯನ್ನು ಬೆಳಗಾವಿಯ ಧರ್ಮನಾಥ ಭವನದಲ್ಲಿ ನಡೆಸಿದರು …

Read More »

ಬೆಳಗಾವಿ ಬಸ್ ನಿಲ್ಧಾಣದಲ್ಲಿ ಯುವಕನಿಗೆ ಚಾಕು ಇರಿತ

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಚಾಕು ಇರಿತದ ಪ್ರಕರಣಗಳು ವಿಪರೀತವಾಗಿವೆ. ಸಣ್ಣ ಪುಟ್ಟ ವಿಚಾರಗಳಿಗೂ ಚಾಕು ಚುಚ್ಚಾಟದ ಹುಚ್ಚಾಟ ನಡೆಯುತ್ತಿದೆ.ಬೆಳಗಾವಿಯಲ್ಲಿ ಬಸ್ ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾದ ಘಟನೆ ಬೆಳಗಾವಿ ಬಸ್ ನಿಲ್ಧಾಣದಲ್ಲಿ ನಡೆದಿದೆ. ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದಾರೆ.ಬೆಳಗಾವಿ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.ಬೆಳಗಾವಿ ತಾಲೂಕಿನ ಪಂತ ಬಾಳೇಕುಂದರಗಿ ಗ್ರಾಮದ ಮಾಜ್ ಸನಧಿ …

Read More »

ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ಇನ್ನಿಲ್ಲ

ಬೆಳಗಾವಿ- ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಿರಿಯ ಕಾಂಗ್ರೆಸ್ ಮುಖಂಡ ಕಾಕಾಸಾಹೇಬ್ ಪಾಟೀಲ ಮದ್ಯರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮದ್ಯರಾತ್ರಿ 2-00 ಗಂಟೆಗೆ ನಿಧನರಾಗಿದ್ದು ಇಂದು ಮಧ್ಯಾಹ್ನ 3-00 ಗಂಟೆಗೆ ಕಾಕಾಸಾಹೇಬ್ ಪಾಟೀಲ ಅವರ ಸ್ವಗ್ರಾಮವಾದ ಚಿಕ್ಕೋಡಿ ತಾಲ್ಲೂಕಿನ ವಾಳಕಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ 1999, 2004 ಹಾಗೂ 2008 ರಲ್ಲಿ ಮೂರು ಬಾರಿ ಶಾಸಕರಾಗಿದ್ದ ಕಾಕಾಸಾಹೇಬ್ …

Read More »