Breaking News

LOCAL NEWS

ಪಾಂಡರಿ ನದಿ ದಡದಲ್ಲಿರುವ ನಿವಾಸಿಗಳನ್ನು ಈಗಲೇ ಶಿಪ್ಟ್ ಮಾಡಿ…!!

ಖಾನಾಪುರ: ಅತಿವೃಷ್ಟಿಯಿಂದಾಗಿ ಹಾನಿಗೊಳಗಾಗುವ ಪ್ರದೇಶಕ್ಕೆ ಸಿಇಓ ಭೇಟಿ ಅತಿವೃಷ್ಟಿ ಎದುರಿಸಲು ಮುಂಜಾಗೃತೆ ವಹಿಸಿ: ಸಿಇಓ ರಾಹುಲ್ ಶಿಂಧೆ ಖಾನಾಪುರ: ಈ ಬಾರಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಾಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಎದುರಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಬುಧವಾರ (ಮೇ-22) ತಾಲೂಕಿನ ಲೋಂಡಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ …

Read More »

ಮೇ. 25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ, ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ ಮೇ, 25 ರಿಂದ ಜೂನ್‌ 4ರ ವರೆಗೆ 5.578 ಟಿಎಂಸಿ ನೀರು ಹರಿಸಲಾಗುತ್ತಿದ್ದು, ನೀರು ಪೋಲಾಗದಂತೆ, ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ, ಸಾರ್ವಜನಿಕರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಸ್ತುತ ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಜನ- ಜಾನುವಾರುಗಳಿಗೆ …

Read More »

ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

ಬೆಳಗಾವಿ : ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ.ಗುಡ್ಡಕಾಯು (91 ) ಅವರು ಸೋಮವಾರ ಬೆಳಗಾವಿಯ ಮಹಾಂತೇಶ ನಗರ ನಿವಾಸದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. 1972 ರಲ್ಲಿ ಗೋಕಾಕ ಕಾಂಗ್ರೆಸ್ ಶಾಸಕರಾಗಿ ಅವರು ಒಂದು ಅವಧಿಗೆ ಆಯ್ಕೆಯಾಗಿದ್ದರು. ಸರಳ-ಸಜ್ಜನಿಕೆಗೆ ಹೆಸರುವಾಸಿಯಾಗಿ ಜನಮನ ಗೆದ್ದಿದ್ದರು. ಚಂದ್ರಶೇಖರ ಗುಡ್ಡಕಾಯು ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಕೆಲ ತಿಂಗಳ …

Read More »

ಜಾತ್ರೆಯಲ್ಲಿ ಆಹಾರ ಸೇವಿಸಿ 46 ಜನ ಅಸ್ವಸ್ಥ ಆಸ್ಪತ್ರೆಗೆ ದಾಖಲು.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿಗ್ರಾಮದಲ್ಲಿ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ ಗ್ರಾಮದ ಜನ.ಅನ್ನ ಪ್ರಸಾದ ಮತ್ತು‌ ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಸ್ಥರು.ಪ್ರಸಾದ ಸೇವಿಸಿದ ಜನರಲ್ಲಿ ಇಂದು ಏಕಾಏಕಿ ವಾಂತಿ-ಭೇದಿಯಾಗಿಕೂಡಲೇ ಅಸ್ತವ್ಯಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಗ್ರಾಮದಲ್ಲಿಯೇ …

Read More »

ಬೆಳಗಾವಿ;ಮೂರು ವರ್ಷದ ಕಂದಮ್ಮನ ಕೊಲೆ

ಬೆಳಗಾವಿ-ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ ಮ‌ೂರು ವರ್ಷದ ಕಂದಮ್ಮ? ಹೌದು ಇಂತಹ ಘಟನೆ ನಡೆದಿರುವದು ಬೆಳಗಾವಿಯಲ್ಲಿ,ಮಲತಾಯಿಯಿಂದ ಮೂರು ವರ್ಷದ ಕಂದಮ್ಮನ ಕೊಲೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಂಗ್ರಾಳಿ ಕೆ.ಹೆಚ್ ಗ್ರಾಮದಲ್ಲಿ ವಾಸವಿದ್ದ ಕುಟುಂಬ.ಮಲತಾಯಿ ಸಪ್ನಾ ನಾವಿ ಮೂರು ವರ್ಷದ ಸಮೃದ್ಧಿ(3) ಕೊಲೆ ಮಾಡಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ.ಇಂದು ಬೆಳಗ್ಗೆ ಬಾಲಕಿಯ ಮೇಲೆ ಕ್ರೌರ್ಯ ಮೆರೆದು ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬಾಲಕಿ ಸಮೃದ್ದಿ ಅಜ್ಜಿ ಹಾಗೂ ಚಿಕ್ಕಪ್ಪನಿಂದ ಸಪ್ನಾ …

Read More »

ಕೆಎಲ್ಇ ಆಸ್ಪತ್ರೆಯಲ್ಲಿ ಹೊಸ ಟೆಕ್ನಾಲಾಜಿ ಸೇವೆಗೆ ಸಮರ್ಪಣೆ..

ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಗ್ಯಾಸ್ಟ್ರೋಎಂಟ್ರಾಲಾಜಿ ವಿಭಾಗದಲ್ಲಿ ನೂತನವಾಗಿ ಅಳವಡಿಸಲಾಗಿರುವ ಇಯುಎಸ್‌ ಎಂಡೋಸ್ಕೋಪಿ ಮತ್ತು ಅಲ್ಟ್ರಾಸೌಂಡ್‌ನ ನೂತನ ಸೇವೆಯನ್ನು ಶ್ರೀ ಹೆಚ್‌ ಎನ್‌ ರಿಲಯನ್ಸ ಫೌಂಡೇಶನ್ ಆಸ್ಪತ್ರೆಯ ಇನ್ಸಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಸೈನ್ಸನ ಮುಖ್ಯಸ್ಥರು ಹಾಗೂ ಎಂಡೋಸ್ಕೋಪಿ ತಜ್ಞವೈದ್ಯರಾದ ಡಾ. ಅಮಿತ ಮೆಡಿಯೋ ಅವರಿಂದಿಲ್ಲಿ ಜನಸೇವೆಗೆ ಅರ್ಪಿಸಿದರು. ನಂತರ ಮಾತನಾಡಿದ ಅವರು. ಆಧುನಿಕತೆ ಬೆಳೆದಂತೆ ವೈದ್ಯ ವಿಜ್ಞಾನ ಸಾಕಷ್ಟು ಪ್ರಗತಿ ಹೊಂದುತ್ತಿದೆ. ಅದರಂತೆ …

Read More »

ಕರ್ನಾಟಕದ ಬೇಡಿಕೆಗೆ ಮಹಾರಾಷ್ಟ್ರದಿಂದ ಕ್ವಿಕ್ ರಿಸ್ಪಾನ್ಸ್….!!

ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾ ಸಿಎಂ ಏಕನಾಥ ಸಿಂಧೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕೊಯ್ನಾ ಡ್ಯಾಮ್ ನಿಂದ …

Read More »

ಚಾಕುವಿನಿಂದ ಇರಿದು, ಬೆಳಗಾವಿ ಜಿಲ್ಲೆಯಲ್ಲಿ ಡಬಲ್ ಮರ್ಡರ್….

ಬೆಳಗಾವಿ: ಅಪ್ರಾಪ್ತ ಮಗಳಿಗೆ ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ತಂದೆಯೇ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ದುಂಡನಕೊಪ್ಪ ಗ್ರಾಮದ ಯಲ್ಲಪ್ಪ ಸೋಮಪ್ಪ ಹಳೇಗೋಡಿ (22), ಮಾಯಪ್ಪ ಸೋಮಪ್ಪ ಹಳೇಗೋಡಿ (20) ಕೊಲೆಯಾದ ಸಹೋದರರು. ಅದೇ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಕೊಲೆ ಮಾಡಿರುವ ಆರೋಪಿ. ಆರೋಪಿ ಫಕೀರಪ್ಪನ‌ ಅಪ್ರಾಪ್ತ ಪುತ್ರಿಯನ್ನು ಪ್ರೀತಿಸುವಂತೆ ಮಾಯಪ್ಪ …

Read More »

ಬೆಳಗಾವಿಯ ಖ್ಯಾತ ಸಾಮಾಜಿಕ ಕಾರ್ಯಕರ್ತ ರಂಗನಾಥ ಪೋತದಾರ ನಿಧನ

ಬೆಳಗಾವಿ : ಬೆಳಗಾವಿಯ ಖ್ಯಾತ ಸಾಮಾಜಿಕ ಕಾರ್ಯಕರ್ತರಾಗಿದ್ದ ರಂಗನಾಥಪೋತದಾರ (85) ಮಂಗಳವಾರ ಪುಣೆಯ ತಮ್ಮ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧುಗಳು ಇದ್ದಾರೆ. ಬೆಳಗಾವಿ ಅನಂತಶಯನಗಲ್ಲಿ ನಿವಾಸಿಯಾಗಿದ್ದ ಅವರು ಬೆಳಗಾವಿ ಮಹಾನಗರ ಪಾಲಿಕೆ ವಾರ್ಡ್ ನಂಬರ್ 31ರ ನಗರಸೇವಕರಾಗಿ ಸೇವೆ ಸಲ್ಲಿಸಿದ್ದರು. ಟಿಳಕ್ ಚೌಕ್ ಸಾರ್ವಜನಿಕ ಗಣೇಶೋತ್ಸವ ಮಂಡಳದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ 50 ವರ್ಷಗಳಿಗೂ ಹೆಚ್ಚು ಕಾಲ ದುಡಿದಿದ್ದರು. ಪೋತದಾರ ಮನೆತನದ …

Read More »

ಬೆಳಗಾವಿ ಜಿಲ್ಲೆಯಲ್ಲಿ ಶೇ.74.87 ರಷ್ಟು ,ಮತದಾನ

      ಬೆಳಗಾವಿ, -ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಮೂರು ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ. 01- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶೇ.78.51 ಮತ್ತು 02-ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಶೇ.71.38ರಷ್ಟು ಮತದಾನವಾಗಿರುತ್ತದೆ. ಇದಲ್ಲದೇ ಕೆನರಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.87 ಮತ್ತು ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. 76.25 ರಷ್ಟು …

Read More »