Breaking News

LOCAL NEWS

ಹಾಲು..ಮೊಸರು..ಮಜ್ಜಿಗೆ…ಬೆಣ್ಣೆ….ತುಪ್ಪ….ಸುದ್ದಿ ಓದ್ರಿ ಯಪ್ಪ..!!

*ಬೆಮೂಲ್ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಸ್* *ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ* *ಬೆಳಗಾವಿಯಲ್ಲಿ ೨೫೦* *ಕೋ.ರೂ. ವೆಚ್ಚದ ಸ್ವಯಂ ಚಾಲಿತ ಮೇಗಾ ಡೇರಿ*ಸ್ಥಾಪನೆಗೆ ಹೆಚ್ಚಿನ* *ಒತ್ತು*- *ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ*- ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಇಲ್ಲಿಯ ಜಿಲ್ಲಾ …

Read More »

ಹಿಂಡಲಗಾ ಜೈಲಿನ ಮೇಲೆ ನೂರಕ್ಕೂ ಹೆಚ್ಚು ಸಿಬ್ಬಂಧಿಗಳ ಜೊತೆ ಪೋಲೀಸರ ದಾಳಿ….

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಕೇಂದ್ರ ‌ಕಾರಾಗೃಹದ ಮೇಲೆ ಬೆಳಗಾವಿ ಪೊಲೀಸರು ಏಕಾಏಕಿ ದಾಳಿ ಮಾಡಿದ್ದು, ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ಜೈಲಿನ ಮೇಲೆ ದಾಳಿ ಮಾಡಲಾಗಿದೆ. ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಮಾರ್ಬಾನ್ಯಾಂಗ್ ಮಾರ್ಗದರ್ಶನದಲ್ಲಿ ಡಿಸಿಪಿ ರೋಹನ್ ಜಗದೀಶ್ ನೇತೃತ್ವದ ತಂಡವು ಜೈಲಿನಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ದಿಢೀರ್ ದಾಳಿ ನಡೆಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ಜೈಲಿನ ಆವರಣದಲ್ಲಿ ‌ಪೊಲೀಸರು ತಪಾಸಣೆ ನಡೆಸಿದ್ದಾರೆ. ಡಿಸಿಪಿಗೆ ನಗರದ ಐದೂ …

Read More »

ಜಗದೀಶ್ ಶೆಟ್ಟರ್ ಮೊದಲು ಬೆಳಗಾವಿಯ ವಿಳಾಸ ಹೇಳಲಿ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ-ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಅವರು ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಟೀಕಾ ಪ್ರಹಾರ ನಡೆಸಿದ ಬೆನ್ನಲ್ಲಿಯೇ ಈಗ ಸಚೆವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಲಾ ಅಂಗಡಿಗೆ ಟಾಂಗ್ ಕೊಟ್ಟಿದ್ದಾರೆ.ಕುಟುಂಬಕ್ಕಿಂತ ಪಕ್ಷ ಮೊದಲು ಎನ್ನುವ ಮಂಗಲಾ ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಸಪೋರ್ಟ್ ಮಾಡಬಹುದಿತ್ತು,ಆದ್ರೆ ಅವರು ಸಪೋರ್ಟ್ ಮಾಡಿದ್ದು ತಮ್ಮ ಬೀಗರಿಗೆ ಪಕ್ಷ ಮೊದಲು ಎಂದು ಮಂಗಲಾ ಅಂಗಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ. ನಾನು ಮಗನ ಪರವಾಗಿ …

Read More »

ಬೆಳ್ಳಂ ಬೆಳಗ್ಗೆ ಕೋರೆ ಮನೆಯಲ್ಲಿ ಮಾಸ್ಟರ್ ಪ್ಲ್ಯಾನ್….!!

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಇಂದು ಬೆಳ್ಳಂ ಬೆಳಗ್ಗೆ ಕೋರೆ ನಿವಾಸದಲ್ಲಿ ಚಹಾ ಪೇ ಚರ್ಚಾ ಮಾಡಿದ್ರು ಮಾಜಿ ಶಾಸಕರ ಅನೀಲ ಬೆನಕೆ ಅವರು ಸಹ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಜಗದೀಶ್ ಶೆಟ್ಟರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಅವರು ಇದೇ ಮೊದಲ ಬಾರಿಗೆ ಪ್ರಭಾಕರ ಕೋರೆ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ರು… ಪ್ರಭಾಕರ ಕೋರೆ ಅವರು ಬಿಜೆಪಿಯ …

Read More »

ಕಾಲು ಬಾಯಿಗೆ, ರೋಗ ಬರಬಹುದು ಬೇಗ,ಬೇಗ ಇಂಜೆಕ್ಷನ್ ಮಾಡಿಸಿ…

ಜಾನುವಾರುಗಳಿಗೆ ಲಸಿಕೆ ಕಡ್ಡಾಯ; ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ನಿತೇಶ ಪಾಟೀಲ ಬೆಳಗಾವಿ, -ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 05ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಜಿಲ್ಲೆಯಲ್ಲಿ ಏಪ್ರಿಲ್ 01 ರಿಂದ ಏಪ್ರಿಲ್ 30 ವರೆಗೆ ಹಮ್ಮಿಕೊಳ್ಳಲಾಗಿದ್ದು, ಬ್ಯಾನರ್, ಪೋಸ್ಟರ್ ಮತ್ತು ಕರಪತ್ರಗಳನ್ನು ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ …

Read More »

ಬೆಳಗಾವಿ – ಗೋವಾ ಬಾರ್ಡರ್ ನಲ್ಲಿ 7 ಲಕ್ಷ ಸೀಜ್ ಆಯ್ತು…

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ, ದಾಖಲೆಗಳಿಲ್ಲದ ₹7.98 ಲಕ್ಷ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರ ತಂಡ ವಶಕ್ಕೆ ಪಡೆದಿದೆ. ನಗರದ ನಿವಾಸಿ ಸಂಜಯ ಬಸವರಾಜ ರೆಡ್ಡಿ ಎನ್ನುವವರು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಹಣ ಇಟ್ಟುಕೊಂಡಿದ್ದರು. ಬಸ್‌ ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುವ ವೇಳೆ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹಣ ಮುಟ್ಟುಗೋಲು ಹಾಕಿಕೊಂಡು ಖಾನಾಪುರದ …

Read More »

ಬೆಳಗಾವಿಯ ಪ್ರಸಿದ್ಧ ,ಯಲ್ಲಮ್ಮನ ದೇವಸ್ಥಾನಕ್ಕೆ ಕೆನಡಾ ದೇಶದಿಂದ ಬಂತು ಕಾಣಿಕೆ….!!

ಕೆನಡಾ ಕಂಟ್ರಿಗೂ…ಯಲ್ಲಮ್ಮನ ಪವಾಡ ಎಂಟ್ರಿ….!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಯಲ್ಲಮ್ಮನ ದೇವಸ್ಥಾನ ಜಗತ್ಪ್ರಸಿದ್ಧ ದೇವಸ್ಥಾನ ಎನ್ನುವದು ಸಾಭೀತಾಗಿದೆ ಯಾಕಂದ್ರೆ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ ಕೆನಡಾ ದೇಶದ ಕರೆನ್ಸಿ ಸಿಕ್ಕಿದೆ. ಬೆಳಗಾವಿಯ ಪ್ರಸಿದ್ಧ ಯಲ್ಲಮ್ಮನ ದೇವಸ್ಥಾನಕ್ಕೆ ಕೆನಡಾ ದೇಶದ ಭಕ್ತರೂ ಬರ್ತಾರೆ ಎನ್ನುವ ವಿಚಾರವೂ ಖಾತ್ರಿಯಾಗಿ,ಬರಗಾಲದ ಸಮಯದಲ್ಲೂ ಹುಂಡಿಯಲ್ಲಿ ಈ ವರ್ಷ ಪ್ರತಿವರ್ಷಕ್ಕಿಂತ ಎರಡು ಕೋಟಿ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಈ ವರ್ಷ ವಿದೇಶದ ಅಂದ್ರೆ ಕೆನಡಾ ದೇಶದ ಕಾಣಿಕೆಯೂ ಮುಟ್ಟಿರುವದು …

Read More »

ಬೆಳಗಾವಿ ಲೋಕಸಭಾ ಅಖಾಡಕ್ಕೆ ಸಾಹುಕಾರ್ ಎಂಟ್ರಿ….!!

ಬೆಳಗಾವಿ- ಬೆಳಗಾವಿ ಲೋಕಸಭಾ ಅಖಾಡಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಂಟ್ರಿ ಹೊಡೆದಿದ್ದಾರೆ.ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಜೊತೆ ಎರಡು ಗಂಟೆಗೂ ಹೆಚ್ವು ಕಾಲ ಚರ್ಚಿಸಿ ಚುನಾವಣೆಯ ರೂಪುರೇಷೆಗಳ ಬಗ್ಗೆ ಸಮಾಲೋಚನೆ ಮಾಡಿದ್ದಾರೆ.ಗುರುವಾರ ಮಧ್ಯಾಹ್ನ ಮಂಗಲಾ ಅಂಗಡಿ ಅವರ ಗೃಹ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಲೆ,ಇದೆ,ಕಾರ್ಯಕರ್ತರು ಉತ್ಸುಕರಾಗಿದ್ದಾರೆ.ಎಲ್ಲರೂ ಒಮ್ಮತದಿಂದ ಕೆಲಸ ಮಾಡುತ್ತಾರೆ.ಎಲ್ಲರಲ್ಲಿಯೂ ಸಹಮತ ಇದೆ‌.ನರೇಂದ್ರ …

Read More »

ಧಾರವಾಡದಿಂದ, ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರ ಪಟ್ಟು…!!

ಧಾರವಾಡ ‌ಲೋಕಸಭೆ ಅಭ್ಯರ್ಥಿ ಪ್ರಹ್ಲಾದ್ ‌ಜೋಶಿ ಬದಲಾವಣೆಗೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ: ಮಾ.31 ರ ಗಡುವು ನೀಡಿದ ಮಠಾಧೀಶರು… ಹುಬ್ಬಳ್ಳಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು ಮಾ. 31 ರೊಳಗೆ ಬದಲಾವಣೆ ಮಾಡಬೇಕೆಂದು ಶಿರಹಟ್ಟಿಮಠದ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಆಗ್ರಹಿಸಿದರು. ಮೂರುಸಾವಿರಮಠದ ಆವರಣದಲ್ಲಿ ವಿವಿಧ ಸ್ವಾಮೀಜಿಗಳೊಂದಿಗೆ ಚಿಂತನ ಮಂಥನ …

Read More »

ಬುಧವಾರ, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ಗ್ರ್ಯಾಂಡ್ ವೆಲ್ ಕಮ್…!!!

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ಅವರು ನಾಳೆ ಬುಧವಾರ ಬೆಳಗಾವಿಗೆ ಬರಲಿದ್ದು ಬೆಳಗಾವಿಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಜಗದೀಶ್ ಶೆಟ್ಟರ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಿದ್ದಾರೆ. ನಾಳೆ,ಬುಧವಾರದಂದು ಬೆಳಿಗ್ಗೆ 10 ಘಂಟೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೀರೆಬಾಗೇವಾಡಿ ಟೋಲ್ ಮೂಲಕ ಬೆಳಗಾವಿ ಲೊಕಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು ಸಾವಿರಾರು ಬಿಜೆಪಿ ಕಾರ್ಯಕರ್ತರು ಅವರಿಗೆ ಬೃಹತ್ ಸ್ವಾಗತ ಮಾಡಲಿದ್ದಾರೆ. ಎಂದು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ …

Read More »