ಹೊಸ ವಂಟಮುರಿ ಘಟನೆ- ಸಂತ್ರಸ್ತ ಮಹಿಳೆಗೆ ಐದು ಲಕ್ಷ ಪರಿಹಾರ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಡಿ.14(ಕರ್ನಾಟಕ ವಾರ್ತೆ): ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ರಾಜ್ಯ ಸರಕಾರದ ವತಿಯಿಂದ ಐದು ಲಕ್ಷ ರೂಪಾಯಿ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇದಲ್ಲದೇ ನೊಂದ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ 50 …
Read More »ಲಕ್ಷ್ಮೀ ಹೆಬ್ಬಾಳಕರ್ ನಿರಾಣಿ ಸವಾಲ್ ಹಾಕಿದ್ದೇನು ಗೊತ್ತಾ…??
ಬೆಳಗಾವಿ- ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಡುವ ವಿಚಾರದಲ್ಲಿ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ ಸಮರ ಶುರುವಾಗಿದೆ.ಮಾಜಿ ಮಂತ್ರಿ ಮುರುಗೇಶ್ ನಿರಾಣಿ ಅವರು ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬಹಿರಂಗ ಸವಾಲು ಹಾಕುವ ಮೂಲಕ ಪಂಚಮಸಾಲಿ ಹೋರಾಟಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ, ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಟ್ಟರೆ ಬಿಜೆಪಿ ಮಂತ್ರಿಗಳಿಗೆ ಕುಂದಾ ಕೊಟ್ಟು ಸನ್ಮಾನ ಮಾಡ್ತೀನಿ ಎಂದು ಲಕ್ಷ್ಮೀ …
Read More »ಶಾಸಕ ಅಭಯ ಪಾಟೀಲರ ಖಾಸಗಿ ನಿರ್ಣಯಕ್ಕೆ ಸರ್ಕಾರದಿಂದ ಅಭಯಹಸ್ತ….
ಶಾಸಕ ಅಭಯ ಪಾಟೀಲ ಮಂಡಿಸಿದ ಖಾಸಗಿ ನಿರ್ಣಯ ಅಂಗೀಕಾರವಾಗಿದೆ.ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಬೆಳಗಾವಿ ಭೇಟಿಯ ನೆನಪಿನ ಶತಮಾನೋತ್ಸವ ಕಾರ್ಯಕ್ರಮ ಆಚರಣೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಲಾಗಿದೆ. *** ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು 1924ರ ಡಿಸೆಂಬರ್ 26 ರಂದು ಬೆಳಗಾವಿಗೆ ಭೇಟಿ ನೀಡಿ, ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಬರುವ ಡಿಸೆಂಬರ್ 26ಕ್ಕೆ ನೂರು ವರ್ಷಗಳು ಪೂರೈಸುತ್ತಿವೆ. ಈ ಸವಿ ನೆನಪಿಗಾಗಿ …
Read More »ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರು..
ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ವ್ಯಕ್ತಿಗಳ ಹೆಸರು ನಾಮಕರಣಕ್ಕಾಗಿ ಕರ್ನಾಟಕ ವಿಧಾನಮಂಡಲದಿಂದ ಕೇಂದ್ರಕ್ಕೆ ಶಿಫಾರಸ್ಸು ಬೆಳಗಾವಿ: ರಾಜ್ಯದ ಗಣ್ಯವ್ಯಕ್ತಿಗಳ ಹಾಗೂ ಐತಿಹಾಸಿಕ ಪುರುಷರ ಹೆಸರುಗಳನ್ನು ಅನ್ವರ್ಥಕಗೊಳಿಸಿ ಗೌರವಿಸಲು ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿವೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಮೂಲ ಸೌಕರ್ಯ ಸಚಿವರಾದ ಎಂ.ಬಿ. ಪಾಟೀಲ ಅವರು ವಿಧಾನಸಭೆಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ …
Read More »ಕಾಮಗಾರಿಗಳನ್ನು ಬೇಗ,ಬೇಗ ಮುಗಿಸಿ- ಮಂಗಲಾ ಅಂಗಡಿ…
ಬೆಳಗಾವಿ- ಬೆಳಗಾವಿ ನಗರ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ರೈಲು ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಅವರು ಇಂದು ದೆಹಲಿಯ ರೈಲು ಭವನದಲ್ಲಿ ಕೇಂದ್ರದ ರೈಲು ಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿಕೊಂಡರು. ಬೆಳಗಾವಿಯ ತಿಲಕವಾಡಿಯ ರೇಲ್ವೆ ಮೂರನೇಯ ಗೇಟ್ ಬಳಿ ನಿರ್ಮಿಸುತ್ತಿರುವ ರೇಲ್ವೆ ಮೇಲ್ಸೆತುವೆ ಕಾಮಗಾರಿ ಏಕಪಥದ ಸೇತುವೆ ಕಾಮಗಾರಿ ಮುಕ್ತಾಯವಾಗಿದ್ದು ಇನ್ನೊಂದು ಪಥದ ಸೇತುವೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.ಈ ಕಾಮಗಾರಿ ವಿಳಂಬದಿಂದ ನಗರದಲ್ಲಿ ವಾಹನ ಸಂಚಾರಕ್ಕೆ …
Read More »ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಡಿಜಿಟಲೀಕರಣಕ್ಕೆ ಸೂಚನೆ
ಸುವರ್ಣ ವಿಧಾನಸೌಧ ನ.12: ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೇ ನೀಡಿದ್ದು, ಈ ಸಂಬAಧ ಕಾರ್ಖಾನೆಗಳ ಮಾಲಿಕರಿಗೆ ಹದಿನೈದು ದಿನಗಳ ಗಡುವು ನೀಡಲಾಗಿದೆ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದರು. ಕೊಠಡಿ ಸಂಖ್ಯೆ 354ರಲ್ಲಿ ಮಂಗಳವಾರ ಸಚಿವ ಶಿವಾನಂದ ಪಾಟೀಲ, ಶಾಸಕ ಲಕ್ಷö್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ …
Read More »ಖಾನಾಪೂರ–ಆಕ್ರಮ ತನಿಖೆಗೆ ಸರ್ಕಾರದ ಆದೇಶ…!!
ಖಾನಾಪೂರ-ಖಾನಾಪೂರದ ಭಾಗ್ಯಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಯನ್ನು ಲೀಜ್ ಮೇಲೆ ನಡೆಸುತ್ತಿರುವ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ್ ಅವರಿಗೆ ಈಗ ಆಕ್ರಮ ವ್ಯವಹಾರದ ತನಿಖೆ ಎದುರಾಗಿದೆ ಸರ್ಕಾರ ಆಕ್ರಮ ತನಿಖೆಗೆ ಆದೇಶ ಹೊರಡಿಸಿದೆ. ಖಾನಾಪೂರದ ಭಾಗ್ಯಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಲೀಜ್ ಆಧಾರದ ಮೇಲೆ ಪಡೆದು ಈ ಕಾರ್ಖಾನೆಯಲ್ಲಿ ಸಹಕಾರಿ ಬ್ಯಾಂಕಿನ ಹಣ ತೊಡಗಿಸಿ,ನಂತರ ಕಾರ್ಖಾನೆಯಿಂದ ಈ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪವನ್ನು ಎದುರಿಸುತ್ತಿರುವ ಖಾನಾಪೂರ ಶಾಸಕ ವಿಠ್ಠಲ ಹಲಗೇಕರ್ …
Read More »ಬೆಳಗಾವಿ ವಂದೇ ಭಾರತ, ರೈಲಿಗೆ ಟೆಕ್ನಿಕಲ್ ಪ್ರಾಬ್ಲಂ…!!
ಬೆಳಗಾವಿ-ಬೆಳಗಾವಿಯಿಂದ ಹುಬ್ಬಳ್ಳಿಗೆ ವಂದೇ ಭಾರತ ರೈಲು ಮಂಜುರಾಗಿದೆ ಎನ್ನುವ ಸುದ್ದಿ ಪ್ರಕಟವಾದಾಗ, ಈ ರೈಲು ಹುಬ್ಬಳ್ಳಿಯಿಂದ ಬೆಳಗಾವಿಯವರೆಗೆ ಪ್ರಾಯೋಗಿಕ ಸಂಚಾರ ನಡೆಸಿದಾಗ ಬೆಳಗಾವಿ ಜನರಿಗೆ ಹಂಡೆ ಹಾಲು ಕುಡಿದಷ್ಟು ಖುಷಿಯಾಗಿತ್ತು.ಆದ್ರೆ ಈ ಖುಷಿ ಈಗ ಮರೀಚಿಕೆಯಾಗಿದೆ. ಡಿಸೆಂಬರ್ 1ರಿಂದ ವಂದೇ ಭಾರತ ರೈಲು ಬೆಳಗಾವಿಯಿಂದ ಬೆಂಗಳೂರಿಗೆ ಸಂಚಾರ ಮಾಡಲಿದೆ ಎನ್ನುವ ಮಾಹಿತಿ ಇತ್ತು,ಆದ್ರೆ ಈ ರೈಲು ಸಂಚಾರಕ್ಕೆ ತಾಂತ್ರಿಕ ತೊಂದರೆ ಇದೆ ಎಂದು ರೈಲ್ವೆ ಬೋರ್ಡ್ ತಗಾದೆ ತೆಗೆದಿದೆ ಎಂದು …
Read More »ಅಪಘಾತ :ಬೆಳಗಾವಿಯಲ್ಲಿ ಇಬ್ಬರ ಸಜೀವ ದಹನ..
ಬೆಳಗಾವಿ-ಟಿಪ್ಪರ್ ಮತ್ತು ಕಾರಿನ ಮಧ್ಯೆ ಬೀಕರ ರಸ್ತೆ ಅಪಘಾತ ಇಬ್ಬರ ಸಜೀವ ದಹನವಾದ ಘಟನೆಬೆ ಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದ ಕುಟುಂಬ,ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟ್ಟಿದ್ದ ನಾಲ್ವರು,ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿ.ಟಿಪ್ಪರ್ ನ ಡಿಸೇಲ್ ಟ್ಯಾಂಕ್ ಒಡೆದು ಹೊತ್ತಿ ಉರಿದ ಕಾರು, ಟಿಪ್ಪರ್.ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಈ ದುರ್ಘಟನೆಯಲ್ಲಿ …
Read More »ವಿರೋಧ ಪಕ್ಷದ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಡ್ತೀವಿ- ಸಿಎಂ ಸಿದ್ರಾಮಯ್ಯ…
ಅಧಿವೇಶನ ಆರಂಭ… ಬೆಳಗಾವಿ, ಡಿಸೆಂಬರ್ 4: ಇಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು :* ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಪೇಕ್ಷಿತ ಯಶಸ್ಸು ಸಾಧ್ಯವಾಗದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ತೆಲಂಗಾಣದಲ್ಲಿ …
Read More »